ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಾಹಿತಿ ದಾಖಲಿಸಿ

Last Updated 1 ಫೆಬ್ರುವರಿ 2021, 16:35 IST
ಅಕ್ಷರ ಗಾತ್ರ

ಕೋಲಾರ: 2021ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ನೋಂದಣಿಗೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಬೇಕು ಎಂದು ಜಿಲ್ಲಾ ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳ ವಿವರವನ್ನು ಆನ್‌ಲೈನ್‌ ಮೂಲಕ ಫೆ.15ರೊಳಗೆ ಅಪ್‌ಲೋಡ್‌ ಮಾಡಬೇಕು ಎಂದು ಹೇಳಿದ್ದಾರೆ.

ಶಾಲೆಗಳು ಮಾಹಿತಿ ಆಪ್‌ಲೋಡ್ ಮಾಡಲು ಬಳಸಬೇಕಾದ ಅರ್ಜಿಯನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ತಲುಪಬಹುದು. ಶಾಲೆಗಳ ಮುಖ್ಯಸ್ಥರಿಗೆ ಈಗಾಗಲೇ ಮಂಡಳಿಯಿಂದ ನೀಡಿರುವ ಯೂಸರ್‌ನೇಮ್‌, ಪಾಸ್‌ವರ್ಡ್ ಬಳಸಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳ ಪೂರ್ಣ ಮಾಹಿತಿ, ಭಾವಚಿತ್ರ ಮತ್ತು ಸಹಿಯೊಂದಿಗೆ ಅಪ್‌ಲೋಡ್‌ ಮಾಡಬೇಕು. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಬಹುತೇಕ ಮಾಹಿತಿಯನ್ನು ಸ್ಟೂಡೆಂಟ್ಸ್‌ ಟ್ರ್ಯಾಕಿಂಗ್‌ ಸಿಸ್ಟಮ್‌ (ಸ್ಯಾಟ್ಸ್‌) ದತ್ತಾಂಶದಿಂದ ಪಡೆಯಲಾಗುತ್ತದೆ. ಆದ ಕಾರಣ ಈಗಿರುವ ಮಾಹಿತಿಯಲ್ಲಿನ ತಪ್ಪುಗಳನ್ನು ಮೊದಲು ಸ್ಯಾಟ್ಸ್‌ನಲ್ಲಿ ಸರಿಪಡಿಸಿ ನಂತರ ಪರೀಕ್ಷಾ ಅರ್ಜಿ ಭರ್ತಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಆನ್‌ಲೈನ್‌ ದತ್ತಾಂಶ ದಾಖಲಾತಿಗಾಗಿ ಶಾಲೆಯಿಂದ ಮಂಡಳಿಗೆ ಪಾವತಿಸುವ ವಿದ್ಯಾರ್ಥಿಗಳ ಒಟ್ಟು ಶುಲ್ಕದಲ್ಲಿ ಪ್ರತಿ ವಿದ್ಯಾರ್ಥಿಗೆ ₹ 25ರಂತೆ ಕಟ್ಟಿ ಉಳಿದ ಶುಲ್ಕವನ್ನು ಮಂಡಳಿಗೆ ಪಾವತಿಸಬೇಕು. ಮಾಹಿತಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು. ಈಗ ನೀಡುವ ಮಾಹಿತಿಯೇ ಮುಂದೆ ಅಂಕ ಪಟ್ಟಿಯಲ್ಲಿ ಬರುತ್ತದೆ. ಹೆಚ್ಚಿನ ಮಾಹಿತಿಗೆ ಶಾಲಾ ಮುಖ್ಯಸ್ಥರು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ 080 23310075 ಅಥವಾ 080 23310076 ದೂರವಾಣಿ ಸಂಖ್ಯೆ ಸಂಪರ್ಕಿಸಿಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT