ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

Last Updated 21 ಮಾರ್ಚ್ 2019, 13:04 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಾದ್ಯಂತ ಗುರುವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಸುಸೂತ್ರವಾಗಿ ನಡೆದಿದ್ದು, 547 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು.

ಮೊದಲ ದಿನ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್ ಮತ್ತು ಉರ್ದು ಪರೀಕ್ಷೆ ನಡೆಯಿತು. ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 19,615 ವಿದ್ಯಾರ್ಥಿಗಳ ಪೈಕಿ 19,068 ಮಂದಿ ಹಾಜರಾದರು.

ಬಂಗಾರಪೇಟೆ ತಾಲ್ಲೂಕಿನ 10 ಕೇಂದ್ರಗಳಲ್ಲಿ 2,958 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 82 ಮಂದಿ ಪರೀಕ್ಷೆಗೆ ಗೈರಾದರು. ಕೆಜಿಎಫ್ ತಾಲ್ಲೂಕಿನ 10 ಕೇಂದ್ರಗಳಲ್ಲಿ 2.672 ಮಕ್ಕಳು ಹೆಸರು ನೋಂದಾಯಿಸಿದ್ದು, 37 ಮಂದಿ ಗೈರಾದರು. ಕೋಲಾರ ತಾಲ್ಲೂಕಿನ 17 ಕೇಂದ್ರಗಳಲ್ಲಿ 5,483 ಮಂದಿ ಹೆಸರು ನೋಂದಾಯಿಸಿದ್ದು, 171 ವಿದ್ಯಾರ್ಥಿಗಳು ಗೈರಾದರು. ಮಾಲೂರು ತಾಲ್ಲೂಕಿನ 10 ಕೇಂದ್ರಗಳಲ್ಲಿ 2,878 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 103 ಮಂದಿ ಗೈರಾದರು.

ಮುಳಬಾಗಿಲು ತಾಲ್ಲೂಕಿನ 11 ಕೇಂದ್ರಗಳಲ್ಲಿ 2,981 ಮಕ್ಕಳು ಹೆಸರು ನೋಂದಾಯಿಸಿದ್ದು, 89 ಮಂದಿ ಪರೀಕ್ಷೆ ಬರೆಯಲಿಲ್ಲ. ಶ್ರೀನಿವಾಸಪುರ ತಾಲ್ಲೂಕಿನ 13 ಕೇಂದ್ರಗಳಲ್ಲಿ 2,673 ಮಂದಿ ಹೆಸರು ನೋಂದಾಯಿಸಿದ್ದು, 65 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು.

ಅಕ್ರಮದ ವರದಿಯಾಗಿಲ್ಲ: ‘ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಯಾವುದೇ ಗೊಂದಲವಿಲ್ಲದೆ ನಡೆದಿದೆ. ಎಲ್ಲಿಯೂ ಪರೀಕ್ಷಾ ಅಕ್ರಮದ ವರದಿಯಾಗಿಲ್ಲ’ ಎಂದು ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌ ತಿಳಿಸಿದರು.

‘ಮಾರ್ಚ್‌ 25ರಂದು ಗಣಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸಿದ್ಧರಾಗಲು 3 ದಿನಗಳ ಕಾಲಾವಕಾಶವಿದೆ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡಬಾರದು. ಅಂಕ ಗಣಿತ, ಬೀಜ ಗಣಿತ, ರೇಖಾ ಗಣಿತದ ಸೂತ್ರಗಳನ್ನು ಅಭ್ಯಾಸ ಮಾಡಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT