ಸೋಮವಾರ, ಆಗಸ್ಟ್ 8, 2022
24 °C

ಕೋಲಾರ: ಉತ್ತರ ಸಹಿತ ಪ್ರಶ್ನೆಪತ್ರಿಕೆ ಬಿಡುಗಡೆ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಸೆಸ್ಸೆಲ್ಸಿ ಹೊಸ ಮಾದರಿಯ ಪರೀಕ್ಷೆಗಾಗಿ ಬಹು ಆಯ್ಕೆ ಪ್ರಶ್ನೆಪತ್ರಿಕೆ ಮಾದರಿಯನ್ನು ಬಿಡುಗಡೆ ಮಾಡಿದೆ. ಅದೇ ಮಾದರಿಯಲ್ಲಿ ಕೀ ಉತ್ತರದ ಸಮೇತ ಪ್ರಶ್ನೆಪತ್ರಿಕೆಗಳನ್ನು ಡಿಡಿಪಿಐ ಕಚೇರಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಮಂಡಳಿ ಮಾದರಿಯಲ್ಲೇ ಮಕ್ಕಳಿಗೆ ಅನುಕೂಲವಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ಉತ್ತರಸಹಿತ ಬಹುಆಯ್ಕೆ ಪ್ರಶ್ನೆಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಶ್ನೆಪತ್ರಿಕೆಗಳನ್ನು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಮುಖ್ಯ ಶಿಕ್ಷಕರ ಮೊಬೈಲ್‌ಗೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿ 120 ಅಂಕಗಳಿಗೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಒಂದು ಪ್ರಶ್ನೆಪತ್ರಿಕೆ ಹಾಗೂ ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ 120 ಅಂಕಗಳ ಮತ್ತೊಂದು ಪ್ರಶ್ನೆಪತ್ರಿಕೆ ಇರುತ್ತದೆ. ಮಾದರಿ ಪ್ರಶ್ನೆಪತ್ರಿಕೆಯಲ್ಲಿ ಗಣಿತದ 1ರಿಂದ 40 ಪ್ರಶ್ನೆಗಳು, 41ರಿಂದ 80ರವರೆಗೂ ವಿಜ್ಞಾನದ ಪ್ರಶ್ನೆಗಳು, 81ರಿಂದ 120ರವರೆಗೂ ಸಮಾಜ ವಿಜ್ಞಾನದ ಪ್ರಶ್ನೆಪತ್ರಿಕೆ ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು, ಪೋಷಕರು ಪ್ರಶ್ನೆಪತ್ರಿಕೆಯ ಮಾದರಿ ಅಗತ್ಯವಿದ್ದರೆ 9449110205 ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದರೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು