ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಗೆ ಕೂಡಲೇ ಸಚಿವರನ್ನು ನೇಮಕ ಮಾಡಿ ಮುಂದಿನ ವಾಲ್ಮೀಕಿ ಜಯಂತಿಯನ್ನು ಅವರ ಅಧ್ಯಕ್ಷತೆಯಲ್ಲಿಯೇ ನಡೆಸುವಂತೆ ಒತ್ತಾಯಿಸಿ ಸೆ.10 ರಂದು ಬೆಂಗಳೂರಿನ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಕೋಟೆ ಶ್ರೀನಿವಾಸ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸುಮಾರು ಎಂಟು ತಿಂಗಳ ಹಿಂದೆ ಸಚಿವರಾಗಿದ್ದ ಬಿ.ನಾಗೇಂದ್ರ ಅವರನ್ನು ಕುತಂತ್ರದಿಂದ ಇ.ಡಿ ದಾಳಿಯಲ್ಲಿ ಸಿಲುಕಿಸಿ ಕೆಳಗಿಳಿಸಲಾಯಿತು. ಅಂದಿನಿಂದಲೂ ಸಚಿವರ ಸ್ಥಾನವು ಖಾಲಿಯಿದೆ. ಸಾಕಷ್ಟು ಬಾರಿ ಸಮುದಾಯದ ಮುಖಂಡರು ಒತ್ತಾಯ ಮಾಡಲಾಗಿದೆ ಎಂದರು.

ರಾಜ್ಯದ ಎಸ್ಟಿ ಮೀಸಲಿನ 14 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಗೆದ್ದಿದ್ದು, ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರವನ್ನು ವಾಲ್ಮೀಕಿ ಸಮುದಾಯವು ವಹಿಸಿದೆ ಎಂಬುದನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರಿನ ಯಾವುದಾದರೂ ಒಂದು ಮೆಟ್ರೋ ರೈಲು ನಿಲ್ದಾಣಕ್ಕೆ ವಾಲ್ಮೀಕಿ ಹೆಸರು ನಾಮಕರಣ ಮಾಡಬೇಕು. ಬೆಂಗಳೂರು ಹೃದಯ ಭಾಗದಲ್ಲಿ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು. ಜನಸಂಖ್ಯೆಗೆ ಅನುಗುಣವಾಗಿ ವಾಲ್ಮೀಕಿ ಸಮುದಾಯಕ್ಕೆ ಅನುದಾನ ಹಂಚಿಕೆ ಮಾಡಬೇಕು. ಇಲ್ಲದೇ ಹೋದರೆ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಮಾಡಲಾಗುತ್ತದೆ ಎಂದದರು.

ವಾಲ್ಮೀಕಿ ಮಹಿಳಾ ಒಕ್ಕೂಟದ ರಾಜ್ಯ ಅಧ್ಯಕ್ಷೆ ಮಂಜುಳಾ ಶ್ರೀನಿವಾಸ್ ಮಾತನಾಡಿದರು. ವಾಲ್ಮೀಕಿ ಸಮುದಾಯದ ಮುಖಂಡರಾದ ಕೋಟೆ ನಾಗರಾಜ್, ಹನುಮಂತಪ್ಪ, ಸಂತೋಷ್, ವೆಂಕಟಸ್ವಾಮಿ, ನರಸಿಂಹ, ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.