ಬುಧವಾರ, ಜನವರಿ 19, 2022
24 °C

‘ಅಪ್ಪು’ ನೆನಪಲ್ಲಿ ತಂಗುದಾಣ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವೇಮಗಲ್‌: ಹೋಬಳಿಯ ಕುರುಗಲ್ ಗ್ರಾಮಸ್ಥರು ಹಾಗೂ ಯುವಕರು ನಟ ಪುನೀತ್‌ ರಾಜ್‌ಕುಮಾರ್‌ ಸ್ಮರಣಾರ್ಥ ಕುರುಗಲ್‌ ಗೇಟ್‌ನಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಿದ್ದು, ತಂಗುದಾಣವನ್ನು ಸೋಮವಾರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಯಿತು.

‘ಪವರ್‌ ಸ್ಟಾರ್‌’ ಎಂದೇ ಖ್ಯಾತರಾಗಿದ್ದ ನಟ ಪುನೀತ್‌ ರಾಜ್‌ಕುಮಾರ್‌ ತಮ್ಮ ಚಲನಚಿತ್ರಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಾ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದರು. ನಟನೆಯೊಂದಿಗೆ ಹಾಡು ಹಾಡುವ ಮೂಲಕ ಕರ್ನಾಟಕದ ಜನರ ಮನಸೂರೆಗೊಂಡಿದ್ದರು. ಅವರು ಬಾಲ್ಯದಲ್ಲಿ ನಟಿಸಿದ ಬೆಟ್ಟದ ಹೂ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬಂದಿತ್ತು’ ಎಂದು ಗ್ರಾಮಸ್ಥರು ಸ್ಮರಿಸಿದರು.

‘ಸರಳ ವ್ಯಕ್ತಿತ್ವದ ಪುನೀತ್‌ ರಾಜ್‌ಕುಮಾರ್‌ ನಿಜಕ್ಕೂ ಪ್ರತಿಭಾವಂತ ನಟ. ದೇಶ ವಿದೇಶದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅವರು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ಅನಾಥಶ್ರಮ, ಉಚಿತ ಶಾಲೆ, ಗೋಶಾಲೆ, ವೃದ್ಧಾಶ್ರಮಗಳನ್ನು ನಡೆಸುತ್ತಾ ಜನಾನುರಾಗಿಯಾಗಿದ್ದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೂ ಒತ್ತು ಕೊಟ್ಟಿದ್ದರು. ಅವರ ಸಮಾಜಮುಖಿ ಕೆಲಸಗಳನ್ನು ನಿಜಕ್ಕೂ ಮರೆಯಲು ಸಾಧ್ಯವಿಲ್ಲ’ ಎಂದರು.

‘ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ತಂಗುದಾಣ ನಿರ್ಮಿಸಿ ಅದಕ್ಕೆ ಪುನೀತ್ ರಾಜ್‌ಕುಮಾರ್‌ರ ಹೆಸರಿಟ್ಟಿದ್ದೇವೆ. ಪುನೀತ್ ರಾಜಕುಮಾರ್‌ ಸಾಂಸರಿಕ ಹಾಗೂ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಚಿತ್ರಗಳಲ್ಲಿ ನಟಿಸಿದ್ದರು. ಅವರ ಜೀವನವು ಯುವ ಪೀಳಿಗೆಗೆ ಆದರ್ಶಪ್ರಾಯವಾಗಿದೆ. ಪುನೀತ್‌ ರಾಜ್‌ಕುಮಾರ್‌ರ ಹೆಸರಿನಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತೇವೆ’ ಎಂದು ಗ್ರಾಮದ ಯುವಕರು ಹೇಳಿದರು.

ಗ್ರಾಮದ ಮುಖಂಡರು, ಯುವಕರು, ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು