ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಗಿ ಖರೀದಿ ಕೇಂದ್ರ ಆರಂಭ

Last Updated 11 ಡಿಸೆಂಬರ್ 2020, 15:22 IST
ಅಕ್ಷರ ಗಾತ್ರ

ಕೋಲಾರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸುವಂತೆ ಸರ್ಕಾರ ಆದೇಶಿಸಿದ್ದು, ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಗೆ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನಿಯೋಜಿಸಲಾಗಿದೆ. ಪ್ರತಿ ಕ್ವಿಂಟಾಲ್ ರಾಗಿಗೆ ₹ 3,295 ಬೆಂಬಲ ಬೆಲೆ ನಿಗದಿಯಾಗಿದೆ. ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಠ 50 ಕ್ವಿಂಟಾಲ್ ಖರೀದಿಸಲಾಗುವುದು ಎಂದು ಹೇಳಿದ್ದಾರೆ.

ಕೋಲಾರ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ಆಸಕ್ತ ರೈತರು ನೋಂದಣಿ ಕೇಂದ್ರಗಳಲ್ಲಿ 2021ರ ಜ.31ರೊಳಗೆ ಹೆಸರು ನೋಂದಣಿ ಮಾಡಿಸಬೇಕು. ನೋಂದಣಿಯಾದ ರೈತರಿಂದ 2021ರ ಮಾರ್ಚ್ 15ರವರೆಗೆ ರಾಗಿ ಖರೀದಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ರೈತರು ನೋಂದಣಿ ಮಾಡಿಸಿಕೊಂಡ ನಂತರ ರಾಗಿ ಖರೀದಿ ಕೇಂದ್ರಕ್ಕೆ ತಂದ ರಾಗಿಯನ್ನು ಕೃಷಿ ಇಲಾಖೆಯಿಂದ ನೇಮಿಸಿದ ಗ್ರೇಡರ್‌ಗಳಿಂದ ಪರೀಕ್ಷೆ ಮಾಡಿಸಲಾಗುತ್ತದೆ. ಗುಣಮಟ್ಟದ ಪ್ರಮಾಣಪತ್ರ ಪಡೆದ ರಾಗಿಯನ್ನು ಖರೀದಿಸಲಾಗುವುದು. ಆ ನಂತರ ಆನ್‌ಲೈನ್‌ ಮೂಲಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT