ವಿದ್ಯಾಗಮದಡಿ ಶಾಲೆ ಆರಂಭಿಸಿ

ಬಂಗಾರಪೇಟೆ: ಕೊರೊನಾದಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದ್ದು, ಅವರ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ, ವಿದ್ಯಾಗಮ ಮೂಲಕ ಮಕ್ಕಳಿಗೆ ಪಾಠ ಆರಂಭಿಸಬೇಕು ಎಂದು ಒತ್ತಾಯಿಸಿ ದಲಿತ ಸಮಾಜ ಸೇನೆಯ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.
ಕೊರೊನಾ ಶುರುವಾಗಿ ಒಂದೂವರೆ ವರ್ಷ ಕಳೆದಿದೆ. ಈ ಕಾರಣದಿಂದಾಗಿ ಕಳೆದ ವರ್ಷ ಸರಿಯಾಗಿ ಪಾಠ ಮಾಡಿಲ್ಲ. ಪರೀಕ್ಷೆ ನಡೆಸದೆ ಉತ್ತೀರ್ಣ ಮಾಡಲಾಗಿದೆ. ಪರಿಸ್ಥಿತಿ ಮುಂದುವರಿದರೆ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಸೂಲಿಕುಂಟೆ ಆನಂದ್ ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಭೌತಿಕ ಪಾಠ ನಡೆಸದೆ ಆನ್‌ಲೈನ್ ಮೂಲಕ ಮಕ್ಕಳಿಗೆ ಪಾಠ ಆರಂಭಿಸಲು ಮಾರ್ಗದರ್ಶನ ನೀಡಿದೆ. ಆನ್‌ಲೈನ್ ಪಾಠದಿಂದ ಯಾವುದೇ ಪ್ರಯೋಜನವಿಲ್ಲ. ಇದರಿಂದ ಮಕ್ಕಳಿಗೆ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು ಎಂದರು.
ಶಾಲೆ ತೆರೆಯದ ಕಾರಣ ಮಕ್ಕಳು ಮಾನಸಿಕವಾಗಿ ಕುಗ್ಗಿದ್ದಾರೆ. ಮತ್ತೊಂದೆಡೆ ಪೋಷಕರೂ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಆದ್ದರಿಂದ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.
ಕೊರೊನಾ ಸೋಂಕು ಇನ್ನೂ ಸಂಪೂರ್ಣವಾಗಿ ತೊಲಗದ ಕಾರಣ ವಿದ್ಯಾಗಮದಡಿ ನಿಗದಿತ ಸ್ಥಗಳಲ್ಲಿ ಪಾಠ ಮಾಡಿ ಮಕ್ಕಳಿಗೆ ಚೈತನ್ಯ ತುಂಬಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಒತ್ತಾಯಿಸಿದರು.
ಹುಣಸನಹಳ್ಳಿ ರಮೇಶ್, ಮಂಜುನಾಥ್, ಕಣಿಂಬೆಲೆ ಮಂಜುನಾಥ್, ವೆಂಕಟೇಶ್, ಮಹೇಂದ್ರ ಮತ್ತು ಬಾಲಕೃಷ್ಣ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.