ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.5ರಿಂದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಡಿಸಿ ಮಂಜುನಾಥ್ ಅವರಿಂದ ಸಿದ್ದತೆಗಳ ಪರಿಶೀಲನೆ
Last Updated 1 ಫೆಬ್ರುವರಿ 2020, 14:08 IST
ಅಕ್ಷರ ಗಾತ್ರ

ಕೋಲಾರ: ರಾಜ್ಯಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಗಳ ಕಾರ್ಯಕ್ರಮ ನಡೆಯುವ ಇಲ್ಲಿನ ಜೂನಿಯರ್ ಕಾಲೇಜು ಮೈದಾನಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಶನಿವಾರ ಭೇಟಿ ನೀಡಿ ಸಿದ್ಧತೆ ವೀಕ್ಷಿಸಿದರು.

ನಗರದಲ್ಲಿ ಫೆ.೫ ರಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

‘ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪ್ರತಿಭಾಕಾರಂಜಿ ಸ್ವರ್ಧೆಗಳಿಗೆ ೨ ಸಾವಿರಕ್ಕೂ ಹೆಚ್ಚು ಮಕ್ಕಳು ಹಾಗೂ ಶಿಕ್ಷಕರು ಹಾಜರಾಗುವ ನೀರಿಕ್ಷೆಯಿದೆ. ಜಿಲ್ಲೆಯ ಘನತೆಯ ದೃಷ್ಟಿಯಿಂದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

‘ಮಕ್ಕಳ ಸುರಕ್ಷತೆಗೆ ಒತ್ತು ನೀಡಬೇಕು. ಮೈದಾನದ ಬಳಿ ಪೊಲೀಸ್ ಬಂದೋಬಸ್ತ್ ಹಾಗೂ ನಗರಸಭೆಯಿಂದ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಬೇಕು. ನೀರಿನ ವ್ಯವಸ್ಥೆ ಮಾಡಿರಬೇಕು’ ಎಂದು ಹೇಳಿದರು.

‘ಮಕ್ಕಳು ಉಳಿದುಕೊಳ್ಳುವ ಮತ್ತು ಕಾರ್ಯಕ್ರಮದ ಸ್ಥಳಕ್ಕೆ ಬರಲು ಬಸ್ ವ್ಯವಸ್ಥೆ ಕಲ್ಪಿಸಬೇಕು. ಇಲ್ಲಿನ ವ್ಯವಸ್ಥೆಯಲ್ಲಿ ಕಾರ್ಯಕ್ರಮ ಲೋಪವಾದರೆ ಅದು ಇಡೀ ರಾಜ್ಯಕ್ಕೆ ಪಸರಿಸುತ್ತದೆ. ಆದ್ದರಿಂದ ಹೆಚ್ಚಿನ ನಿಗಾವಹಿಸಿ, ಸಣ್ಣಪುಟ್ಟ ಲೋಪಗಳಿಗೂ ಅವಕಾಶ ನೀಡಬಾರದು’ ಎಂದು ತಾಕೀತು ಮಾಡಿದರು.

‘ಫೆ.೩ರ ಸೋಮವಾರ ಬೆಳಿಗ್ಗೆ ೧೧ಕ್ಕೆ ಜಿಲ್ಲಾಡಳಿತ ಭವನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ನೇಮಕಗೊಂಡ ಎಲ್ಲಾ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆದಿದ್ದು, ಅಲ್ಲಿ ನೀವು ಕೈಗೊಂಡಿರುವ ಸಿದ್ದತೆಗಳ ಪರಿಶೀಲನೆ ನಡೆಯಲಿದೆ’ ಎಂದರು.

‘ಪ್ರತಿಭಾಕಾರಂಜಿ ಮತ್ತು ಕಲೋತ್ಸವದ ಪ್ರತಿ ಸ್ಪರ್ಧೆಗೂ ಇವೆಂಟ್ ಅಧಿಕಾರಿಯನ್ನು ನೇಮಿಸಲಾಗುತ್ತಿದ್ದು, ಯಾವುದೇ ಗೊಂದಲಕ್ಕೆ ಅವಕಾಶ ನೀಡವುದಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ತಿಳಿಸಿದರು.

ನಗರಕೋಶ ಯೋಜನಾ ನಿರ್ದೇಶಕ ರಂಗಸ್ವಾಮಿ, ನಗರಸಭೆ ಆಯುಕ್ತ ಶ್ರೀಕಾಂತ್, ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ಡಯಟ್ ಪ್ರಾಂಶುಪಾಲ ಜಯರಾಮರೆಡ್ಡಿ, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಬಾಲಾಜಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಚೌಡಪ್ಪ, ಜೂನಿಯರ್ ಕಾಲೇಜು ಪ್ರಾಂಶುಪಾಲ ಮಂಜುನಾಥ್, ವಿಷಯ ಪರಿವೀಕ್ಷಕರಾದ ಶಶಿವಧನಾ, ಗಾಯತ್ರಿ, ಕೃಷ್ಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT