ಕೋಲಾರ: ‘ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಭಯ. ಹೀಗಾಗಿ, ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ’ ಎಂದು ಶಾಸಕ ಕೆ.ವೈನಂಜೇಗೌಡ ಹೇಳಿದರು.

ನಗರದ ಹೊರವಲಯದಲ್ಲಿ ಶನಿವಾರ ಕಾಂಗ್ರೆಸ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೇಂದ್ರ ಸರ್ಕಾರವು ರಾಜ್ಯಪಾಲರ ಬಳಸಿಕೊಂಡು ಮುಖ್ಯಮಂತ್ರಿ ಅವರನ್ನು ಎದುರಿಸುತ್ತಿದೆ. ಸಿದ್ದರಾಮಯ್ಯ ದುರ್ಬಲ ಆಗುವುದಿಲ್ಲ, ಭಯನು ಬೀಳುವುದಿಲ್ಲ, ಅವರಿಗೆ ಹೈಕಮಾಂಡ್ ಮತ್ತು ಎಲ್ಲಾ ಶಾಸಕರು ಬೆಂಬಲವಾಗಿ ನಿಂತಿದ್ದಾರೆ’ ಎಂದರು.

‘ಬಿಜೆಪಿ ನಾಯಕರ ಮೇಲೂ ಎಫ್ಐಆರ್ ಆಗಿದೆ. ಅದರ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. ತಪ್ಪೇ ಮಾಡದ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರು ರಾಜಿನಾಮೇ ಕೊಡುವ ಪ್ರಮೇಯವಿಲ್ಲ ಬರಲ್ಲ’ ಎಂದು ಹೇಳಿದರು.

ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಹೇಳಿರುವ ಕಾಂಗ್ರೆಸ್ ಮುಖಂಡ ಕೋಳಿವಾಡ ಅವರ ಕುರಿತು, ‘ಕೋಳಿವಾಡ ಅವರಿಗೆ ವಯಸ್ಸಾಗಿದೆ. ಹೀಗಾಗಿ, ಏನೇನೋ ಮಾತನಾಡುತ್ತಿದ್ದಾರೆ. ಅಷ್ಟಕ್ಕೂ ರಾಜೀನಾಮೆ ಕೇಳಲು ಕೋಳಿವಾಡ ಯಾರು. ಶಾಸಕರು ಯಾರಾದರೂ ಒತ್ತಾಯ ಮಾಡುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.