ಶನಿವಾರ, ಸೆಪ್ಟೆಂಬರ್ 25, 2021
22 °C

ಕೋಲಾರ: ಪುತ್ಥಳಿ ಬೇಡ, ಜಿಲ್ಲಾಧಿಕಾರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ತಾಲ್ಲೂಕಿನ ಮೈಲಾಂಡಹಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪುತ್ಥಳಿ ನಿರ್ಮಿಸದಂತೆ ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅವರಿಗೆ ಮಂಗಳವಾರ ತಕರಾರು ಅರ್ಜಿ ಸಲ್ಲಿಸಿ ಮನವಿ ಮಾಡಿದರು.

ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಸ್ಥಾಪನೆ ವಿಚಾರವಾಗಿ ವಿವಾದ ಸೃಷ್ಟಿಯಾಗಿತ್ತು. ಗ್ರಾಮದ ಸಮುದಾಯವೊಂದರ ಜನರು ಪುತ್ಥಳಿ ನಿರ್ಮಾಣಕ್ಕಾಗಿ ರಾತ್ರೋರಾತ್ರಿ ಸಾರ್ವಜನಿಕ ಸ್ಥಳದಲ್ಲಿ 5 ಕಡೆ ಗುಂಡಿ ಅಗೆದಿದ್ದರಿಂದ ಬಿಗುವಿವ ವಾತಾವರಣ ಸೃಷ್ಟಿಯಾಗಿತ್ತು. ಹೀಗಾಗಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಣಾಧಿಕಾರಿ ಹಾಗೂ ಪೊಲೀಸರು ಗ್ರಾಮಕ್ಕೆ ಭೇಟಿ ಕೊಟ್ಟು ಪರಿಸ್ಥಿತಿ ತಿಳಿಗೊಳಿಸಿದ್ದರು.

ಇದರ ಬೆನ್ನಲ್ಲೇ ಜಿಲ್ಲಾಧಿಕಾರಿಗೆ ತಕರಾರು ಅರ್ಜಿ ಸಲ್ಲಿಸಿರುವ ಗ್ರಾಮದ ಮುಖಂಡರು ಹಾಗೂ ಮಹಿಳೆಯರು, ‘ಸುಪ್ರೀಂ ಕೋರ್ಟ್‌ ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ನಿರ್ಮಿಸದಂತೆ ನೀಡಿರುವ ಆದೇಶವನ್ನು ಪಾಲಿಸಬೇಕು’ ಎಂದು ಕೋರಿದರು.

‘ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಸ್ಥಾಪಿಸಿದರೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ವಿವಿಧ ಸಮುದಾಯದ ನಾಯಕರ ಪುತ್ಥಳಿ ಸ್ಥಾಪನೆಗೆ ಬೇಡಿಕೆ ಬಂದರೆ ಗ್ರಾಮದ ಮಧ್ಯೆ ಸ್ವಲ್ಪ ಸ್ಥಳಾವಕಾಶ ಇಲ್ಲದಂತಾಗುತ್ತದೆ. ಆದ ಕಾರಣ ಸಾರ್ವಜನಿಕ ಸ್ಥಳ ಹೊರತುಪಡಿಸಿ ಗ್ರಾಮದ ಬೇರೆ ಸ್ಥಳದಲ್ಲಿ ಪುತ್ಥಳಿ ನಿರ್ಮಾಣ ಮಾಡಿದರೆ ಯಾರ ವಿರೋಧವಿಲ್ಲ’ ಎಂದು ಗ್ರಾಮಸ್ಥ ರಮೇಶ್ ಹೇಳಿದರು.

ಗ್ರಾಮಸ್ಥರಾದ ಮುನಿಯಪ್ಪ, ಮಂಜುನಾಥ್, ಮಾರ್ಕೋಂಡಯ್ಯ, ಚೌಡೇಗೌಡ, ವೆಂಕಟರಮಣಪ್ಪ, ಎಂ.ಎ.ಮಂಜುನಾಥ್, ಶಾಂತಮ್ಮ, ಪಾಪಮ್ಮ, ನಾಗಮ್ಮ, ನೀಲಮ್ಮ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.