ಮುಳಬಾಗಿಲು: ಮೋತಿ ಮಸೀದಿ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಅನುಕೂಲವಾಗುವಂತೆ ಶಾದಿ ಮಹಲ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಶ್ರಮಿಸಲಾಗುವುದು ಸಚಿವ ಎಚ್.ನಾಗೇಶ್ ಹೇಳಿದರು.

ನಗರದ ಮುತ್ಯಾಲಪೇಟೆ 4ನೇ ವಾರ್ಡ್ನ ಮೋತಿ ಮಸೀದಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.

ಈ ಬಾರಿ ನಗರಸಭೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರ ಆಯ್ಕೆ ಸಂತೋಷ ತಂದಿದೆ. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ನಗರಸಭೆ ಸದಸ್ಯರಾದವರಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಚತುರತೆ ಇರಬೇಕು. ಪ್ರತಿಯೊಬ್ಬ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿವಾರ್ಡ್ನ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅಧ್ಯಕ್ಷರು ಈ ನಿಟ್ಟಿನಲ್ಲಿ ಕೆಲಸ ಮಾಡಿದರೆ ನಗರಸಭೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಅಭಿವೃದ್ಧಿ ಹೊಂದುತ್ತದೆ ಎಂದು ಸಚಿವರು ಹೇಳಿದರು.

ವಾರ್ಡ್ ಸದಸ್ಯ ಚಾಂದ್ ಪಾಷಾ, ಪೌರಾಯುಕ್ತ ಜಿ.ಶ್ರೀನಿವಾಸಮೂರ್ತಿ, ತಾಲ್ಲೂಕು ದರಕಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ಗುತ್ತಿಗೆದಾರ ಅತ್ತಿಪಲ್ಲಿ ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.