ಬಂಗಾರಪೇಟೆ: ಬಕ್ರೀದ್ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮುಖಂಡರ ಸಭೆಯನ್ನು ಮಂಗಳವಾರ ಆಯೋಜಿಸಲಾಯಿತು.

ವೃತ್ತ ನಿರೀಕ್ಷಕ ಮಾರ್ಕೊಂಡಯ್ಯ ಮಾತನಾಡಿ, ‘ಯಾವುದೇ ವದಂತಿಗಳಿಗೆ ಕಿವಿಗೊಡದೆ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು’ ಎಂದು ಹೇಳಿದರು.

ಹಬ್ಬ ಆಚರಣೆಗೆ ಸರ್ಕಾರ ಹಾಗೂ ಸ್ಥಳೀಯ ಆಡಳಿತ ವಿಧಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆ ಬಾರದಂತೆ ಸಮುದಾಯವು ಶಿಸ್ತಿನಿಂದ ಹಬ್ಬ ಆಚರಿಸಬೇಕು. ಯಾವುದೇ ಗೊಂದಲ ಅಥವಾ ಅನುಮಾನಾಸ್ಪದ ಘಟನೆ ಕಂಡುಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಪಿಎಸ್ಐ ಬಿ.ವಿ. ಕಿರಣ್ ಕುಮಾರ್, ಪ್ರತಿಯೊಬ್ಬರೂ ಸೌಹಾರ್ದ ಮತ್ತು ನಂಬಿಕೆಯಿಂದ ಹಬ್ಬ ಆಚರಣೆ ಮಾಡಿದಾಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಹಬ್ಬ ಹರಿದಿನಗಳಲ್ಲಿ ಎಲ್ಲ ಸಮುದಾಯದವರೂ ಸಹೋದರತ್ವದ ಭಾವನೆ ಹೊಂದಿರಬೇಕು. ನಿಯಮ ಬಾಹಿರವಾಗಿ ಗೋವುಗಳನ್ನು ಹತ್ಯೆ ಮಾಡಬಾರದು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾರಾದರೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.

ಶಾಂತಿ ಸಭೆಯಲ್ಲಿ ಪ್ರೊಬೆಷನರಿ ಪಿಎಸ್ಐ ಧನಂಜಯ್, ಮುನೀರ್, ಜಲೀಲ್, ಅಜ್ಮತುಲ್ಲಾ, ಜುಲ್ಪಾನ್, ರಂಗನಾಥಚಾರಿ, ಶ್ರೀನಿವಾಸ್ ಸೇರಿದಂತೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-18-208263046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.