ಬಂಗಾರಪೇಟೆ: ತಾಲ್ಲೂಕಿನ ದೇಶಿಹಳ್ಳಿಯಲ್ಲಿ ಕಾಮಸಮುದ್ರ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ಒಳಚರಂಡಿಯನ್ನು ಸಂಪೂರ್ಣ ಕಿತ್ತುಹಾಕಿದ್ದು, ಸಾರ್ವಜನಿಕರಿಗೆ ಪರ್ಯಾಯ ರಸ್ತೆ ವ್ಯವಸ್ಥೆ ಇಲ್ಲದೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಅಭಿವೃದ್ಧಿ ಕಾರ್ಯದ ಅಂಗವಾಗಿ ಒಳಚರಂಡಿ ಮಾರ್ಗವನ್ನು ಸಂಪೂರ್ಣ ಧ್ವಂಸಗೊಳಿಸಲಾಗಿದೆ. ಆದರೆ, ಕಾಮಗಾರಿ ಆರಂಭಿಸುವ ಮುನ್ನ ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ಯಾವುದೇ ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿಲ್ಲ. ಇದರಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವೃದ್ಧರು ಹಾಗೂ ರೋಗಿಗಳು ಪ್ರತಿನಿತ್ಯ ಸುಮಾರು ಮೂರು ಕಿ.ಮೀ. ಬಳಸಿ ಓಡಾಡುವಂತಾಗಿದೆ ಎಂದು ದೂರಿದ್ದಾರೆ.

ಕಾಮಗಾರಿ ಸ್ಥಳದಲ್ಲಿ ಕನಿಷ್ಠ ನಡೆದುಕೊಂಡು ಹೋಗಲು ಸಣ್ಣ ದಾರಿಯನ್ನೂ ಬಿಡದೆ ಸಂಪೂರ್ಣ ರಸ್ತೆ ಬಂದ್ ಮಾಡಲಾಗಿದೆ. ಮುಖ್ಯ ರಸ್ತೆಯನ್ನೇ ನಂಬಿಕೊಂಡಿದ್ದ ಸ್ಥಳೀಯ ಅಂಗಡಿ ಮುಂಗಟ್ಟುಗಳ ಮಾಲೀಕರು ಗ್ರಾಹಕರಿಲ್ಲದೆ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿ ಮುಗಿಯುವವರೆಗೆ ಸಾರ್ವಜನಿಕರ ಸಂಚಾರಕ್ಕೆ ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-18-809625984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.