ಕೋಲಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿ ನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಕಲಾವಿದರರನ್ನು ಒಳಗೊಂಡಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಕಲಾವಿದರು ಇರುವುದು ಕಡ್ಡಾಯವಾಗಿದೆ.

ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಜಿಲ್ಲೆಯ ಬೀದಿ ನಾಟಕ ಮತ್ತು ಜಾನಪದ ಸಂಗೀತ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆಯು ಕೋಲಾರ ವಾರ್ತಾಭವನದಲ್ಲಿ ಜರುಗಲಿದೆ.

ಆಸಕ್ತರು ಆ.1ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ವಾರ್ತಾ ಇಲಾಖೆಯಲ್ಲಿ ಪಡೆಯಬಹುದೆಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.