ಮುಷ್ಕರ ನೀರಸ: ಬಸ್‌– ಆಟೊ ಸೇವೆ ಅಬಾಧಿತ

7

ಮುಷ್ಕರ ನೀರಸ: ಬಸ್‌– ಆಟೊ ಸೇವೆ ಅಬಾಧಿತ

Published:
Updated:
Deccan Herald

ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಒಕ್ಕೂಟವು ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದ ಕರೆಗೆ ಜಿಲ್ಲೆಯಲ್ಲಿ ಮಂಗಳವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಜಿಲ್ಲೆಯಲ್ಲಿ ಸಾರಿಗೆ ನೌಕರರ ಯಾವುದೇ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಲಿಲ್ಲ. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಆಟೊಗಳು, ಸರಕು ಸಾಗಣೆ ವಾಹನಗಳು ಪ್ರತಿನಿತ್ಯದಂತೆ ರಸ್ತೆಗಿಳಿದವು. ವಾಣಿಜ್ಯ ವಹಿವಾಟು ಹಾಗೂ ವಾಹನ ಸಂಚಾರ ಎಂದಿನಂತೆಯೇ ಇತ್ತು.

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬಸ್‌ ಸೇವೆ ಸಹಜವಾಗಿತ್ತು. ನಗರದ ಕೆಎಸ್‌ಆರ್‌ಟಿಸಿ ಮತ್ತು ಹಳೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ದೊಡ್ಡ ದಂಡೇ ಕಂಡುಬಂತು. ತರಕಾರಿ, ಹಾಲು, ದಿನಸಿ ಪದಾರ್ಥ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿಲ್ಲ. ಹೀಗಾಗಿ ಜನಜೀವನಕ್ಕೆ ಯಾವುದೇ ತೊಂದರೆಯಾಗಲಿಲ್ಲ.

ಎಪಿಎಂಸಿ ಮಾರುಕಟ್ಟೆಯಿಂದ ಹೊರ ರಾಜ್ಯಗಳಿಗೆ ಸರಕು ಸಾಗಣೆ ವಾಹನಗಳಲ್ಲಿ ತರಕಾರಿ ಸಾಗಿಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಬಸ್‌ ನಿಲ್ದಾಣ, ಡಿಪೋ ಮತ್ತು ಪ್ರಮುಖ ವೃತ್ತಗಳಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಹಿರಿಯ ಪೊಲೀಸ್‌ ಅಧಿಕಾರಿಗಳು ನಿಯಮಿತವಾಗಿ ಗಸ್ತು ನಡೆಸಿದರು.

ಮೋಟಾರು ವಾಹನ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥೆ ಬಲಪಡಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟವು ಮುಷ್ಕರಕ್ಕೆ ಕರೆ ನೀಡಿತ್ತು.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !