ಕೆಜಿಎಫ್: ವಿದ್ಯಾರ್ಥಿನಿಗೆ ಥಳಿಸಿದ ಆರೋಪದ ಮೇರೆಗೆ ಆಲಿಕಲ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ ಅವರನ್ನು ಅಮಾನತುಗೊಳಿಸಿ ಉಪ ನಿರ್ದೇಶಕ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ.
ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗಣೇಶನ ವಿಗ್ರಹ ಮಾಡಿಕೊಂಡು ಬಂದಿದ್ದರಿಂದ ಕುಪಿತಗೊಂಡ ಮುಖ್ಯಶಿಕ್ಷಕಿ ವಿದ್ಯಾರ್ಥಿನಿಯನ್ನು ಕೋಲಿನಿಂದ ಹೊಡೆದಾಗ, ಆಕೆಯ ಕೈ ಮೂಳೆ ಮುರಿದಿತ್ತು ಎಂದು ವಿದ್ಯಾರ್ಥಿನಿ ಮತ್ತು ಪೋಷಕರು ಆರೋಪಿಸಿದ್ದರು. ಗ್ರಾಮಸ್ಥರು ಸಹ ಮುಖ್ಯ ಶಿಕ್ಷಕಿಯನ್ನು ಗ್ರಾಮಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ ವಿಚಾರಣೆ ನಡೆಸಿ, ವರದಿ ಸಲ್ಲಿಸಿದ್ದರು. ವರದಿಯ ಪ್ರಕಾರ ಅಮಾನತು ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.