ಕೋಲಾರ: ‘ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ 25ರಿಂದ ಆರಂಭವಾಗಲಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪದಾಧಿಕಾರಿಗಳು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ನೀಡಿದ 25 ಸಾವಿರ ಮಾಸ್ಕ್ ಸ್ವೀಕರಿಸಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಕ್ಕಳ ಶೈಕ್ಷಣಿಕ ಜೀವನದ ಬಹು ಮುಖ್ಯ ಘಟ್ಟ. ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಸುಸೂತ್ರವಾಗಿ ಪರೀಕ್ಷೆ ನಡೆಸಿ’ ಎಂದು ಸಲಹೆ ನೀಡಿದರು.

‘ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿ ವಿದ್ಯಾರ್ಥಿಯು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೇಂದ್ರದ ಪ್ರವೇಶ ಭಾಗದಲ್ಲೇ ಮಕ್ಕಳಿಗೆ ಕೈ ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್‌ನ ವ್ಯವಸ್ಥೆ ಮಾಡಬೇಕು. ಕೊರೊನಾ ಸೋಂಕಿನ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿ ಅಂತರ ಕಾಯ್ದುಕೊಳ್ಳುವಂತೆ ತಿಳಿವಳಿಕೆ ನೀಡಿ’ ಎಂದು ತಿಳಿಸಿದರು.

‘ಆರೋಗ್ಯ ಇಲಾಖೆ ಸಿಬ್ಬಂದಿಯು ಪರೀಕ್ಷೆ ಆರಂಭಕ್ಕೂ ಮುನ್ನವೇ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಹಾಜರಿದ್ದು, ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಜತೆಗೆ ಕೇಂದ್ರಕ್ಕೆ ನಿಯೋಜನೆಗೊಂಡ ಪರೀಕ್ಷಾ ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡಬೇಕು. ಸಿಬ್ಬಂದಿ ಕೇಂದ್ರದಲ್ಲೇ ಆಗಾಗ್ಗೆ ಸ್ಯಾನಿಟೈಸರ್ ಬಳಕೆ ಮಾಡಬೇಕು’ ಎಂದು ಹೇಳಿದರು.

‘ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಧೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗಬೇಕು. ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಬೇಕು. ಆರೋಗ್ಯ ಸಮಸ್ಯೆಯಿರುವ ಮಕ್ಕಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಬೇಕು’ ಎಂದು ಸೂಚಿಸಿದರು.

ಉಚಿತ ಮಾಸ್ಕ್: ‘ರೋವರ್ಸ್, ರೇಂಜರ್ಸ್ ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಕೋವಿಡ್–-19 ವಿರುದ್ಧದ ಸಮರದಲ್ಲಿ ನಿಸ್ವಾರ್ಥ ಸೇವೆಯೊಂದಿಗೆ ಜತೆಗೂಡಿದ್ದೇವೆ. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 8.48 ಲಕ್ಷ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ಉಚಿತವಾಗಿ ಮಾಸ್ಕ್ ವಿತರಿಸಲಿದ್ದೇವೆ. ಜಿಲ್ಲೆಯಲ್ಲಿ 1 ಲಕ್ಷ ಮಾಸ್ಕ್ ನೀಡುವ ಗುರಿಯಿದ್ದು, ಈಗಾಗಲೇ 25 ಸಾವಿರ ಮಾಸ್ಕ್ ಕೊಟ್ಟಿದ್ದೇವೆ’ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಕೆ.ವಿ.ಶಂಕರಪ್ಪ ವಿವರಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪ ಆಯುಕ್ತೆ ಉಮಾದೇವಿ, ಸಂಘಟಕರಾದ ಬಾಬು, ವಿಶ್ವನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.