ಶ್ರೀನಿವಾಸಪುರ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಶಿಸ್ತು ಮತ್ತು ಸೇವೆಗೆ ಹೆಸರಾಗಿದೆ. ಶಿಕ್ಷಕರು ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಈ ತರಬೇತಿ ನೀಡಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪದಾಧಿಕಾರಿಗಳಿಂದ ಸಂಸ್ಥೆಯ ವಾರ್ಷಿಕ ಚಟುವಟಿಕೆ ಪುಸ್ತಕ ಸ್ವೀಕರಿಸಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಅಭಿವೃದ್ಧಿಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾರ್ಯದರ್ಶಿ ಟಿ.ಎಂ.ರಾಮ ಕೃಷ್ಣೇಗೌಡ ಮಾತನಾಡಿ, ತಾಲ್ಲೂಕಿನಲ್ಲಿ ಸಂಸ್ಥೆ ಅಭಿವೃದ್ಧಿಗೆ ಪೂರಕವಾದ ಸಲಹೆ ನೀಡುವಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ. ಅವರು ಮನವಿಗೆ ಸ್ಪಂದಿಸಿ ಪ್ರತಿಕ್ರಿಯಿಸಿದ್ದಾರೆ. ಅಭಿವೃದ್ಧಿಗೆ ಸಹಾಯ ಹಸ್ತ ನೀಡುವ ಭರವಸೆ ನೀಡಿದ್ದಾರೆ. ಸಂಸ್ಥೆ ಬಲಪಡಿಸುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ಕಾರ್ಯದರ್ಶಿ ವಿಶ್ವನಾಥ್, ಸ್ಥಳೀಯ ಘಟಕದ ಖಜಾಂಚಿ ಜಿ.ವಿ.ಚಂದ್ರಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.