ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಗಾರಪೇಟೆ | ಕ್ರೀಡೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

Published : 24 ಸೆಪ್ಟೆಂಬರ್ 2024, 14:24 IST
Last Updated : 24 ಸೆಪ್ಟೆಂಬರ್ 2024, 14:24 IST
ಫಾಲೋ ಮಾಡಿ
Comments

ಬಂಗಾರಪೇಟೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 2023–24 ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನವಚೇತನ ಪ್ರೌಢಶಾಲಾ ವಿದ್ಯಾರ್ಥಿಗಳು ನೆಟ್‌ಬಾಲ್ ಹಾಗೂ ಕ್ರಿಕೆಟ್, ಶಾಟ್‌ಪುಟ್ ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ನವಚೇತನ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಲ್.ರಾಮಕೃಷ್ಣಪ್ಪ ಮಾತನಾಡಿ, ಮಕ್ಕಳು ಆರೋಗ್ಯವಾಗಿದ್ದರೆ ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸದೃಢ ದೇಹದಲ್ಲಿ ಸದೃಢ ಮನಸ್ಸಿರುತ್ತದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ ಎಂದರು.

ನವ ಚೇತನ ವಿದ್ಯಾ ಸಂಸ್ಥೆ ಅಧ್ಯಕ್ಷ ರವಿ ಕುಮಾರ್ ಮಾತನಾಡಿ, ಕ್ರೀಡಾಕೂಟದಲ್ಲಿ ಸ್ಪರ್ಧಿಗಳ ಸಂಖ್ಯೆ ಹೆಚ್ಚಿರುವುದರಿಂದ ವಿಚಲಿತರಾಗಬಾರದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ವೇಳೆ ಉಪಾಧ್ಯಕ್ಷ ನಾಗರಾಜ್, ಖಜಾಂಚಿ ರಾಮಚಂದ್ರ, ಸಹ ಕಾರ್ಯದರ್ಶಿ ಸಿ.ವಿ. ಮಂಜುನಾಥ್, ಮುಖ್ಯೋಪಾಧ್ಯಾಯ ನಿರ್ಮಲ, ದೈಹಿಕ ಶಿಕ್ಷಣ ಶಿಕ್ಷಕ ಶಿವರಾಜ್, ಯಶೋಧ, ವೆಂಕಟಸುಬ್ಬಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT