ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹುಣಸೇನಹಳ್ಳಿ ಗ್ರಾಮದ ನಿವೇಶನರಹಿತ ಬಡ ಕುಟುಂಬಗಳಿಗೆ ನಿವೇಶನ ನೀಡುವಂತೆ ಕೋರಿ ಕರ್ನಾಟಕ ಸಿಂಹ ಸೇನೆ ರಕ್ಷಣಾ ವೇದಿಕೆ ಸದಸ್ಯರು ಇಲ್ಲಿ ಸೋಮವಾರ ಉಪ ವಿಭಾಗಾಧಿಕಾರಿ ಆನಂದ್ಪ್ರಕಾಶ್ ಮೀನಾ ಅವರಿಗೆ ಮನವಿ ಸಲ್ಲಿಸಿದರು.

‘ಬಡ ಕುಟುಂಬಗಳಿಗೆ ನಿವೇಶನ ಕೋರಿ ಬಂಗಾರಪೇಟೆ ತಾಲ್ಲೂಕು ಆಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ, ತಾಲ್ಲೂಕು ಆಡಳಿತ ಮನವಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಿಗಳಿಗೆ ಬಡ ಜನರ ಬಗ್ಗೆ ಕಾಳಜಿಯಿಲ್ಲ’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಹುಣಸೇನಹಳ್ಳಿ ಗ್ರಾಮದ ಸಾಕಷ್ಟು ಕುಟುಂಬಗಳಿಗೆ ಸ್ವಂತ ಮನೆಯಿಲ್ಲ. ಈ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಯು ಬಂಗಾರಪೇಟೆ ತಹಶೀಲ್ದಾರ್ಗೆ ಸೂಚನೆ ಕೊಟ್ಟಿದ್ದಾರೆ. ಆದರೆ, ತಹಶೀಲ್ದಾರ್ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸುಧೀರ್ ದೂರಿದರು.

ಮನವಿಗೆ ಸ್ಪಂದಿಸಿದ ಉಪ ವಿಭಾಗಾಧಿಕಾರಿ, ‘ಬಡ ಕುಟುಂಬಗಳಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಸಂಘಟನೆಯ ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷೆ ಸರಸ್ವತಿ, ಹುಣಸೇನಹಳ್ಳಿ ಗ್ರಾಮಸ್ಥರಾದ ಮಹಾಲಕ್ಷ್ಮೀ, ಚಂದ್ರಮ್ಮ, ಗಜವೇಣಿ, ಜಯಾ, ಮಲ್ಲಿಕಾ, ರಾಧಾ, ಶಿವಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.