ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಹೊಸದಾಗಿ 6 ಮಂದಿಗೆ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ.
ಕೋಲಾರ, ಮಾಲೂರು ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಇಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 285ಕ್ಕೆ ಏರಿಕೆಯಾಗಿದೆ.
ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 5, ಮಾಲೂರು ತಾಲ್ಲೂಕಿನ 12 ಮತ್ತು ಕೆಜಿಎಫ್, ಮುಳಬಾಗಿಲು ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.