ಗುರುವಾರ , ಮೇ 26, 2022
28 °C

ಕೋಲಾರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ವಿ.ಆರ್‌.ಸುದರ್ಶನ್‌ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಅವರನ್ನು ಜಿಲ್ಲಾ ಕಾಂಗ್ರೆಸ್‌ ಘಟಕದ ಪದನಿಮಿತ್ತ ಅಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿದ್ದ ಕೆ.ಚಂದ್ರಾರೆಡ್ಡಿ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ನೀಡದ ಕಾರಣ ಅಸಮಾಧಾನಗೊಂಡು 2021ರ ನವೆಂಬರ್‌ನಲ್ಲಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಳಿಕ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನ ಖಾಲಿಯಿತ್ತು.

ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ, ಪಕ್ಷದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಸದಸ್ಯತ್ವ ನೋಂದಣಿ ಸೇರಿದಂತೆ ಜಿಲ್ಲೆಯಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳ ನಿರ್ವಹಣೆಗಾಗಿ ಸುದರ್ಶನ್‌ ಅವರನ್ನು ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಶಿವಕುಮಾರ್‌ ಆದೇಶದಲ್ಲಿ ತಿಳಿಸಿದ್ದಾರೆ.

ಸುದರ್ಶನ್‌ ಅವರು ಜಿಲ್ಲೆಯಲ್ಲಿ ತಕ್ಷಣವೇ ಪಕ್ಷದ ಜವಾಬ್ದಾರಿ ವಹಿಸಿಕೊಂಡು ಸದಸ್ಯತ್ವ ನೋಂದಣಿ ಪ್ರಕ್ರಿಯೆ ಮುಂದುವರಿಸಬೇಕು. ಜಿಲ್ಲೆಯಲ್ಲಿನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸುದರ್ಶನ್‌ ಅವರಿಗೆ ಸಹಕಾರ ನೀಡಬೇಕು. ಪಕ್ಷದ ಎಲ್ಲಾ ಹಂತದ ನಾಯಕರ ಸಹಕಾರದೊಂದಿಗೆ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಕೆಲಸ ಮಾಡಬೇಕು ಎಂದು ಶಿವಕುಮಾರ್‌ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.