ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸಪುರ: ವಿಡಿಯೊ ಮಾಡಿ ಆತ್ಮಹತ್ಯೆಗೆ ಯತ್ನ

Last Updated 24 ಜೂನ್ 2019, 13:50 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಪಟ್ಟಣದ ಈದ್ಗಾ ಮೈದಾನದ ಸಮೀಪ ವಿವಾಹಿತ ವ್ಯಕ್ತಿಯೊಬ್ಬರು ಮೊಬೈಲ್ ಫೋನ್‌ನಲ್ಲಿ ವಿಷ ಸೇವಿಸುವ ವಿಡಿಯೊಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ ಸುಲೇಮಾನ್‌ (28) ಎಂದು ಗುರುತಿಸಲಾಗಿದೆ. ಪಟ್ಟಣದ ಜಾಕೀರ್‌ ಹುಸೇನ್‌ ಮೊಹಲ್ಲಾದ ನಿವಾಸಿಯಾದ ಸುಲೇಮಾನ್‌, ಹೈದರಾಲಿ ಮೊಹಲ್ಲಾದಲ್ಲಿ ಮದುವೆಯಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದಾನೆ. ಕಾರು ಚಾಲನೆ ಮಾಡಿ ಜೀವನ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ.

ಘಟನಾ ಸ್ಥಳದಲ್ಲಿದ್ದ ಕೆಲವರು, ಸುಲೇಮಾನ್ ಕಾರಿನಲ್ಲಿ ಕುಳಿತು ವಿಷ ಸೇವಿಸುತ್ತಿದ್ದುದನ್ನು ಕಂಡು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರು. ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT