ಶುಕ್ರವಾರ, ಜೂನ್ 5, 2020
27 °C

ಮಕ್ಕಳನ್ನು ನೀರಿಗೆ ತಳ್ಳಿ ತಾಯಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ತಾಲ್ಲೂಕಿನ ಕುಪ್ಪಹಳ್ಳಿ ಸಮೀಪ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಕೋನೇಟಿ ತಿಮ್ಮನಹಳ್ಳಿ ಗ್ರಾಮದ ರತ್ನಮ್ಮ(30), ಮಕ್ಕಳಾದ ಹೇಮಂತ್‌(6), ಯಶವಂತ್‌(3) ಎಂದು ಗುರುತಿಸಲಾಗಿದೆ.

ಕುಪ್ಪಹಳ್ಳಿ ಗ್ರಾಮಕ್ಕೆ ಸಮೀಪದ ಕೋನೇಟಿ ತಮ್ಮನಹಳ್ಳಿ ಗ್ರಾಮದ ರತ್ನಮ್ಮ(30) ಮಾನಸಿಕ ಅಸ್ವಸ್ಥರಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು. ಮಕ್ಕಳೊಂದಿಗೆ ಕುಪ್ಪಹಳ್ಳಿ ಗ್ರಾಮದ ಸಮೀಪ ಹೋಗಿ, ಮಂಜುನಾಥ್‌ ಎಂಬುವವರ ಕೃಷಿ ಹೊಂಡಕ್ಕೆ ಮಕ್ಕಳನ್ನು ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಮಹಿಳೆಯ ಪತಿ ಚಿಕ್ಕರೆಡ್ಡಪ್ಪ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸ್‌ ಸರ್ಕಲ್ ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ವಿಠ್ಠಲ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು