ಶನಿವಾರ, ಮೇ 21, 2022
23 °C

ಕೋಲಾರ: 3 ದೇವಾಲಯಗಳಲ್ಲಿ ಭಾನುವಾರ ರಾತ್ರಿ ಸರಣಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲ್ಲೂಕಿನ ಸುಗಟೂರು ಹೋಬಳಿ ವ್ಯಾಪ್ತಿಯ 3 ದೇವಾಲಯಗಳಲ್ಲಿ ಭಾನುವಾರ ರಾತ್ರಿ ಸರಣಿ ಕಳವು ನಡೆದಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಕಾಕಿನತ್ತ ಗ್ರಾಮದ ಗಂಗಮ್ಮ ದೇವಾಲಯದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ₹ 10 ಲಕ್ಷ ಮೌಲ್ಯದ ಆಭರಣಗಳು ಹಾಗೂ ಹುಂಡಿಯಲ್ಲಿದ್ದ ₹ 2 ಸಾವಿರ ದೋಚಿದ್ದಾರೆ. ಇದೇ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲೂ ಕೈಚಳಕ ತೋರಿರುವ ಕಳ್ಳರು ₹ 4 ಸಾವಿರ ಹುಂಡಿ ಹಣ ಕಳವು ಮಾಡು ದೇವರ ಅಲಂಕಾರಿಕ ವಸ್ತುಗಳು ಮತ್ತು ದೇವಸ್ಥಾನದ ಬ್ಯಾಂಕ್‌ ಪುಸ್ತಕವನ್ನು ಸ್ವಲ್ಪ ದೂರದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಮಾಧವ ಗುರ್ಜೇನಹಳ್ಳಿಯ ಗಂಗಮ್ಮ ದೇವಾಲಯಕ್ಕೆ ನುಗ್ಗಿರುವ ಕಳ್ಳರು ಹುಂಡಿಯಲ್ಲಿ ₹ 8 ಸಾವಿರ ಕಳವು ಮಾಡಿದ್ದಾರೆ. ಕೆಲವೇ ತಾಸುಗಳ ಅಂತರದಲ್ಲಿ ಮೂರು ಪ್ರತ್ಯೇಕ ದೇವಸ್ಥಾನಗಳಲ್ಲಿ ಕಳವು ನಡೆದಿರುವುದು ಸುಗಟೂರು ಹೋಬಳಿ ವ್ಯಾಪ್ತಿಯ ಜನರಲ್ಲಿ ಆತಂಕ ಮೂಡಿಸಿದೆ. ಕೋಲಾರ ಗ್ರಾಮಾಂತರ ಠಾಣೆ
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು