ಕೋಲಾರ: ‘ಸರ್ಕಾರಿ ಶಾಲೆಗಳು ಬಲವರ್ಧನೆಗೆ ಶಿಕ್ಷಕರ ಜತೆ ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ಶಾಸಕ ಕೆ ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಂದ ಇಲ್ಲಿ ಬುಧವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿ, ‘ಹಿಂದಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಹಿಂದೆ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಓದಿನತ್ತ ಹೆಚ್ಚು ಗಮನ ಹರಿಸುತ್ತಿದ್ದರು. ಆದರೆ, ಈಗ ವಿದ್ಯಾರ್ಥಿಗಳಲ್ಲಿ ಕಂಪ್ಯೂಟರ್ ಮತ್ತು ಮೊಬೈಲ್ ಬಳಕೆಯ ಗೀಳು ಹೆಚ್ಚಿದೆ’ ಎಂದು ವಿಷಾದಿಸಿದರು.

‘ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನಡುವಿನ ವ್ಯತ್ಯಾಸ ಹೆಚ್ಚಾಗುತ್ತಿದೆ. ಪೋಷಕರಲ್ಲಿ ಇಂಗ್ಲೀಷ್ ವ್ಯಾಮೋಹ ಹೆಚ್ಚಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ವಿಷಾದಕರ. ಪೋಷಕರು ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಕಡೆ ನಿಲುವು ಹೊಂದುವುದು ಸೂಕ್ತ. ವಿದ್ಯಾರ್ಥಿಗಳನ್ನು ಓದಿನತ್ತ ಕೊಂಡೊಯ್ಯಬೇಕು’ ಎಂದು ಸಲಹೆ ನೀಡಿದರು.

‘ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದ ಜತೆಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಈ ದಿಸೆಯಲ್ಲಿ ಶಿಕ್ಷಕರು ನಿರಂತರ ಅಧ್ಯಯನಶೀಲರಾಗಬೇಕು. ಪ್ರತಿ ವಿದ್ಯಾರ್ಥಿ ಶಾಲೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ, ಕಾರ್ಯದರ್ಶಿ ಎಂ.ನಾಗರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಅಶ್ವತ್ಥನಾರಾಯಣಪ್ಪ, ಕಾರ್ಯದರ್ಶಿ ನಾರಾಯಣಸ್ವಾಮಿ, ರಾಜ್ಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವಿಭಾಗೀಯ ಕಾರ್ಯದರ್ಶಿ ಆರ್. ಶ್ರೀನಿವಾಸನ್, ಜಿಲ್ಲಾ ಅಧ್ಯಕ್ಷ ಜಿ.ಶ್ರೀನಿವಾಸ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.