ಪಿಎಲ್ಡಿ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಿ: ಸೊಣ್ಣಿಗೌಡ

ಮುಳಬಾಗಿಲು: ಅವಿಭಜಿತ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಅಧಿಕಾರ ಸಿಕ್ಕಿದೆ. ಬ್ಯಾಂಕನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡಲಾಗುವುದು. ಎಲ್ಲರೂ ಸಹಕಾರ ನೀಡಬೇಕು ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಸೊಣ್ಣಿಗೌಡ ಹೇಳಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ ಬ್ಯಾಂಕ್ನಲ್ಲಿ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪಿಎಲ್ಡಿ ಬ್ಯಾಂಕ್ಗೆ ರಾಜ್ಯದಲ್ಲಿ ಉತ್ತಮ ಸ್ಥಾನ ದೊರೆತಿದೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಅಭಿವೃದ್ಧಿಪಡಿಸುವತ್ತ ನಿರ್ದೇಶಕರು ಮತ್ತು ಆಡಳಿತ ಮಂಡಳಿ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.
ಸರ್ಕಾರಿ ನೌಕರರಿಗೆ ಹಾಗೂ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ ನೀಡುವ ಮೂಲಕ ವ್ಯಾಪಾರವನ್ನು ವೃದ್ಧಿಗೊಳಿಸಬೇಕು ಎಂದು ಆಶಿಸಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್. ರಾಜೇಂದ್ರಗೌಡ, ಉಪಾಧ್ಯಕ್ಷ ರತ್ನಪ್ಪ, ನಿರ್ದೇಶಕರಾದ ಕೊತ್ತೂರು ಗಂಗಿರೆಡ್ಡಿ, ಶ್ರೀನಿವಾಸ್, ಮರಕಲಘಟ್ಟ ಶಂಕರನಾರಾಯಣ ಗೌಡ, ಗೊಲ್ಲಹಳ್ಳಿ ಸತೀಶ್, ನರಸಿಂಹಪ್ಪ, ಪ್ರೇಮಾವತಮ್ಮ, ಬ್ಯಾಂಕ್ ವ್ಯವಸ್ಥಾಪಕಿ ಭಾರತಿ ಹಾಜರಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.