ಕೋಲಾರ: ‘ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜ.12ರಿಂದ 18ರವರೆಗೆ ಯುವ ಸಪ್ತಾಹ ಆಚರಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್ಕುಮಾರ್ ತಿಳಿಸಿದರು.

ಯುವ ಸಪ್ತಾಹದ ಸಿದ್ಧತೆ ಸಂಬಂಧ ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ವಿವಿಧ ಇಲಾಖೆಗಳ ಸಹಯೋಗದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಯಶಸ್ವಿಯಾಗಿ ಯುವ ಸಪ್ತಾಹ ಆಚರಿಸಲಾಗುವುದು. ಸಪ್ತಾಹದಲ್ಲಿ ಯುವ ಸಮೂಹಕ್ಕೆ ಉತ್ತಮ ಸಂದೇಶ ನೀಡಬೇಕು’ ಎಂದರು.

‘ಜ.17ರಂದು ಪ್ರಾಧಿಕಾರದ ವತಿಯಿಂದ ನೆಹರೂ ಯುವ ಕೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಯೋಗದಲ್ಲಿ ಕಾನೂನು ಸೇವೆಗಳ ಕುರಿತ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಮಾಹಿತಿ ನೀಡಿದರು.

‘ಜಿಲ್ಲೆ ಸೇರಿದಂತೆ ಎಲ್ಲೆಡೆ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಿ ಯುವ ಸಪ್ತಾಹ ನಡೆಸಲಾಗುವುದು. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜ.12ರಂದು ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.