ತಮಿಳುನಾಡಿನಿಂದ ನಮ್ಮ ರಾಜ್ಯದ ಕನ್ನಡ ಶಾಲೆಗೆ ಬಂದು ಕನ್ನಡ ಕಲಿಯುತ್ತಿದ್ದಾರೆ ಎಂಬುದು ಹೆಮ್ಮೆಯ ಸಂಗತಿ. ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವುದು ನಮ್ಮ ಜವಾಬ್ದಾರಿ. ಹಾಗಾಗಿ ಮಕ್ಕಳಿಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯ ಒದಗಿಸಲಾಗುವುದು. ಈ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈಗಾಗಲೇ ಅತಿಥಿ ಶಿಕ್ಷರರೊಬ್ಬರನ್ನು ನೇಮಿಸಲಾಗಿದೆ. ವಾರದಲ್ಲಿ ಶಾಲೆಗೆ ಭೇಟಿ ನೀಡಲಾಗುವುದು. ಶೀಘ್ರ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು.
–ಕೆಂಪಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಾಲೂರು
ನನಗೆ ಕನ್ನಡ ಕಲಿಯಲು ತುಂಬಾ ಇಷ್ಟ. ಹಾಗಾಗಿ ಕನ್ನಡ ಕಲಿಯಲು ಕನ್ನಡ ಶಾಲೆಗೆ ಸೇರಿದ್ದೇನೆ. 1ನೇ ತರಗತಿಯಿಂದ ಕನ್ನಡ ಶಾಲೆಯಲ್ಲಿ ಓದುತ್ತಿದ್ದೇನೆ. ನನ್ನ ಪೋಷಕರು ಕೂಲಿ ಮಾಡಿ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ.
–ಶಂಕರನ್, ಐದನೇ ತರಗತಿ ವಿದ್ಯಾರ್ಥಿ
ಹೊಸಮನೆಗಳು ಶಾಲೆಗೆ ತಮಿಳುನಾಡಿನ ಚಾಪರಪಲ್ಲಿಯಿಂದ ನಾಲ್ವರು ವಿದ್ಯಾರ್ಥಿಗಳು ದಾಖಲಾಗಿದ್ದರು. ಆದರೆ ಒಬ್ಬ ವಿದ್ಯಾರ್ಥಿ ಶಾಲೆಗೆ ಬರುತ್ತಿಲ್ಲ. ಮೂವರು ತಪ್ಪದೇ ಶಾಲೆಗೆ ಹಾಜರಾಗುತ್ತಿದ್ದಾರೆ. ಚೆನ್ನಾಗಿ ಕನ್ನಡ ಕಲಿಯುತ್ತಿದ್ದಾರೆ.