ಕೋಲಾರ: ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿವಾರು ಸಮೀಕ್ಷೆ ನಡೆಸಲು ತಾಲ್ಲೂಕಿನ ನರಸಾಪುರ ಗ್ರಾಮಕ್ಕೆ ನಿಯೋಜನೆಯಾಗಿದ್ದ ಶಿಕ್ಷಕಿಯೊಬ್ಬರು ನಾಪತ್ತೆಯಾಗಿದ್ದಾರೆ.

ತಾಲ್ಲೂಕಿನ ಕೆ.ಬಿ.ಹೊಸಹಳ್ಳಿ ಶಾಲೆಯ ಶಿಕ್ಷಕಿ ಅಕ್ತರ್ ಬೇಗಂ (50) ಕಾಣೆಯಾಗಿರುವ ಶಿಕ್ಷಕಿ. ಅವರು ಕೋಲಾರ ನಗರ ಮಹಾಲಕ್ಷ್ಮಿ ಬಡಾವಣೆಯಲ್ಲಿ ವಾಸವಾಗಿದ್ದಾರೆ.

ಸರಿಯಾಗಿ ಕುಟುಂಬಗಳು ಸಿಗದ ಒತ್ತಡದಿಂದ ಶಿಕ್ಷಕಿಯು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸೋಮವಾರ ಬೆಳಿಗ್ಗೆಯಿಂದ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಮೊಬೈಲ್ ಮನೆಯಲ್ಲಿಟ್ಟು, ಗುರುತಿನ ಚೀಟಿ ಮಾತ್ರ ತೆಗೆದುಕೊಂಡು ಸಮೀಕ್ಷೆಗೆ ಹೋಗಿದ್ದರು ಎಂಬುದು ಗೊತ್ತಾಗಿದೆ. ಅವರ ಪತ್ತೆಗೆ ಸಿಬ್ಬಂದಿ, ಅಧಿಕಾರಿಗಳು ಹಾಗೂ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ.

ಪತಿ ಶೌಕತ್ ಅಲಿ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಸಂಬಂಧ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಶಿಕ್ಷಕಿ ಮನೆಗೆ ಸಿಬ್ಬಂದಿಯನ್ನು ಕಳಿಸಿದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.