ಕೋಲಾರ: ಸೇವೆಯಿಂದ ನಿವೃತ್ತರಾದ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎನ್.ಎಂ.ಮುನಿವೆಂಕಟಪ್ಪ ಅವರನ್ನು ಶಾಲಾಭಿವೃದ್ದಿ ಸಮಿತಿ ವತಿಯಿಂದ ಬುಧವಾರ ಸನ್ಮಾನಿಸಲಾಯಿತು.

ಶಾಲೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ‘ಶಿಕ್ಷಕ ವೃತ್ತಿಗಿಂತ ಶ್ರೇಷ್ಠ ವೃತ್ತಿ ಮತ್ತೊಂದಿಲ್ಲ. ಶಿಕ್ಷಕರಾಗಿ ನಿವೃತ್ತರಾದ ನಂತರವೂ ಗುರುಗಳೆಂದು ಗುರುತಿಸಿ ಗೌರವಿಸುವ ಶಿಷ್ಯ ವೃಂದವಿದೆ’ ಎಂದರು.

‘ಶಿಕ್ಷಕರು ಜೀವನಪೂರ್ತಿ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ. ಸಮಾಜಕ್ಕೆ ಸುಶಿಕ್ಷಿತ ಮಾನವ ಸಂಪನ್ಮೂಲ ನೀಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಶಿಕ್ಷಕರನ್ನು ನಂಬಿ ಶಾಲೆಗೆ ಬರುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ವೃತ್ತಿ ಬದುಕು ಸಾರ್ಥಕ’ ಎಂದು ಹೇಳಿದರು.

‘29 ವರ್ಷ ಸೇವೆ ಸಲ್ಲಿಸಿದ್ದೇನೆ. ನನ್ನ ಅನೇಕ ಶಿಷ್ಯರು ಉನ್ನತ ಹುದ್ದೆಗಳಲ್ಲಿದ್ದಾರೆ. ಅವರನ್ನು ಕಂಡರೆ ಸಂತಸವಾಗುತ್ತದೆ. ಮಕ್ಕಳಿಗೆ ಅಕ್ಷರದ ಬೆಳಕು ನೀಡುವ ಶಿಕ್ಷಕ ವೃತ್ತಿಯನ್ನು ಗೌರವಿಸುವ ಮೂಲಕ ಮುನ್ನಡೆದರೆ ಶಿಕ್ಷಕರ ಕುಟುಂಬಕ್ಕೂ ಒಳ್ಳೆಯದಾಗುತ್ತದೆ’ ಎಂದು ಎನ್.ಎಂ.ಮುನಿವೆಂಕಟಪ್ಪ ತಿಳಿಸಿದರು.

ಶಾಲೆ ಎಸ್ಡಿಎಂಸಿ ಅಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷೆ ಶರಣ್ಯ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಸೌಮ್ಯಲತಾ, ಖಲೀಮ್ ಉಲ್ಲಾ, ಶಿಕ್ಷಕರಾದ ಭವಾನಿ, ಸುಮಾ, ಹೇಮಲತಾ, ಭಾರತಿ, ಸುಮಿತ್ರಾ ವೆಸ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.