ಬುಧವಾರ, ಸೆಪ್ಟೆಂಬರ್ 30, 2020
21 °C

ಸಮಾಜದಲ್ಲಿ ಶಿಕ್ಷಕರ ಪಾತ್ರ ಹಿರಿದು: ವೈ.ಎ.ನಾರಾಯಣಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ಪ್ರಬುದ್ಧ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಹಿರಿದು. ಭಾರತೀಯ ಪರಂಪರೆಯ ಗುರು ಶಿಷ್ಯ ಸಂಬಂಧ ಮುಂದುವರಿಯಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಶಿಕ್ಷಕರು ಮಕ್ಕಳಲ್ಲಿ ಅರಿವು ಮೂಡಿಸಬೇಕು. ಸರ್ಕಾರ ಮಾದಕ ವಸ್ತು ಮಾರಾಟ ಮತ್ತು ಬಳಕೆಯಲ್ಲಿ ನಿರತರಾಗಿರುವ ವ್ಯಕ್ತಿಗಳ ವಿರುದ್ಧ ಪಕ್ಷಾತೀತವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಅನಿಷ್ಟವನ್ನು ಕೊನೆಗಾಣಿಸಬೇಕು. ಸ್ವಸ್ಥ ಸಮಾಜ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಬೇಕು ಎಂದು ಹೇಳಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ 23 ಶಿಕ್ಷಕರು ಹಾಗೂ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್‌.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಎಸ್‌.ಆನಂದ್‌, ಜಿಕೆ.ಎನ್‌.ವೇಣುಗೊಪಾಲ್‌, ಜಯರಾಮರೆಡ್ಡಿ, ತಹಶೀಲ್ದಾರ್‌ ಎಸ್‌.ಎಂ. ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಯರಾಂ, ದಿಂಬಾಲ ಅಶೋಕ್‌, ಕೆ.ಕೆ.ಮಂಜುನಾಥರೆಡ್ಡಿ, ಎಂ.ನಾಗರಾಜ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎನ್‌.ಗೋವಿಂದರೆಡ್ಡಿ, ಕೆ.ಎಚ್‌.ಸಂಪತ್‌ ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ವಸಂತ, ಶ್ರೀನಿವಾಸ್‌, ಸುಬ್ರಮಣಿ, ಸುಲೋಚನ, ಬೈರೇಗೌಡ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು