ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸಂಘದ ಚುನಾವಣೆ: ಸಭೆ

Last Updated 14 ನವೆಂಬರ್ 2020, 14:41 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಸಂಬಂಧ ತಾಲ್ಲೂಕಿನ ಗೌಡಹಳ್ಳಿಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಎನ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಶನಿವಾರ ಶಿಕ್ಷಕರ ಸಭೆ ನಡೆಸಲಾಯಿತು.

ಸಭೆಯಲ್ಲಿ ಪಾಲ್ಗೊಂಡರ ನೌಕರರು ಹಾಗೂ ಶಿಕ್ಷಕರ ಸಂಘಟನೆಗಳ ಪ್ರಮುಖರು ನಿಸ್ವಾರ್ಥ ಮನೋಭಾವ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುವ ಬದ್ಧತೆಯಿರುವ ಶಿಕ್ಷಕರನ್ನು ತಾಲ್ಲೂಕು ಪದಾಧಿಕಾರಿಗಳಾಗಿ ಆಯ್ಕೆ ಮಾಡಬೇಕೆಂದು ಚರ್ಚಿಸಿದರು.

‘ಶಿಕ್ಷಕ ಗೆಳೆಯರ ಬಳಗದಲ್ಲಿರುವ ಶಿಕ್ಷಕ ಮುಖಂಡರು ನಿಸ್ವಾರ್ಥ ಸೇವೆಗೆ ಹೆಸರಾಗಿದ್ದಾರೆ. ಹಲವು ವರ್ಷಗಳಿಂದ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ, ನೋಟ್‌ಬುಕ್‌, ಶೂ ಸೇರಿದಂತೆ ಅಗತ್ಯ ವಸ್ತುಗಳನ್ನು ದಾನಿಗಳ ನೆರವಿನಿಂದ ಕೊಡಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳ ಉಳಿವಿಗೆ ಸಹಾಯವಾಗಿದೆ’ ಎಂದು ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ನಿಸ್ವಾರ್ಥ ಮನೋಭಾವದ ಶಿಕ್ಷಕರನ್ನು ಚುನಾವಣಾ ಕಣಕ್ಕಿಳಿಸಿದರೆ ಒಳ್ಳೆಯದು. ಶಿಕ್ಷಕರನ್ನು ಸಂಘಟಿಸಿ ಸಮಸ್ಯೆಗಳಿಗೆ ಹೋರಾಡುವ ಆತ್ಮಸ್ಥೈರ್ಯ ಇರುವವರನ್ನು ಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕೆಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಶಿಕ್ಷಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಕೆಲಸ ಮಾಡುವಂತಿರಬೇಕು. ಈ ನಿಟ್ಟಿನಲ್ಲಿ ತಾಲ್ಲೂಕಿನ ನೌಕರರ ಮತ್ತು ಶಿಕ್ಷಕರ ಸಂಘಟನೆಗಳ ಸಹಕಾರ ಪಡೆದು ಉತ್ತಮ ತಂಡ ರಚಿಸಿ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಬೇಕು. ತಮ್ಮ ಜತೆಗೆ ಬರಲಿಚ್ಛಿಸುವವರನ್ನು ಮತ್ತು ತಟಸ್ಥವಾಗಿ ಇರುವ ಸಮಾನ ಮನಸ್ಕ ಶಿಕ್ಷಕರನ್ನು ಒಗ್ಗೂಡಿಸಿ ಬಲಿಷ್ಠ ಸಂಘಟನೆ ಕಟ್ಟಬೇಕೆಂದು ಎಂದು ತೀರ್ಮಾನಿಸಲಾಯಿತು.

ಶಿಕ್ಷಕರು ವೇತನ ತಾರತಮ್ಯ, ವರ್ಗಾವಣೆ ನೀತಿಯಲ್ಲಿನ ಗೊಂದಲ, ಬಡ್ತಿ ವಿಳಂಬ ಸಮಸ್ಯೆ ಎದುರಿಸುತ್ತಿದ್ದಾರೆ, ಆದ್ದರಿಂದ ಜಾತಿ, ಧರ್ಮದ ಎಲ್ಲೆ ಮೀರಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರ ಆಯ್ಕೆ ಅಗತ್ಯ ಎಂದು ಹಲವು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಸಂಘಗಳ ಮತ್ತು ನೌಕರರ ಸಂಘದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಅಪ್ಪಯ್ಯಗೌಡ, ನಾಗರಾಜ್, ಶಿವರಾಮೇಗೌಡ, ಎಂ.ಬಿ.ಶ್ರೀನಿವಾಸ್, ಶಿಕ್ಷಕರ ಗೆಳೆಯರ ಬಳಗದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ವೀರಣ್ಣಗೌಡ, ಖಜಾಂಚಿ ಚಂದ್ರಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಖಜಾಂಚಿ ಕೆ.ವಿಜಯ್, ಸದಸ್ಯ ಎಸ್.ಚೌಡಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT