ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಪೌರ ಕಾರ್ಮಿಕರ ಕೊಡುಗೆ ಅಪಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ನಗರದ ಸ್ವಚ್ಛತೆಗೆ ನಿರಂತರ ಶ್ರಮಿಸುವ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳ ಆಯೋಜನೆ ಎಲ್ಲರ ಜವಾಬ್ದಾರಿಯಾಗಬೇಕು’ ಎಂದು ನಗರಸಭೆ ಉಪಾಧ್ಯಕ್ಷ ಎನ್.ಎಸ್.ಪ್ರವೀಣ್‌ಗೌಡ ಹೇಳಿದರು.

ನಗರಸಭೆ ಹಾಗೂ ಆರ್‌.ಎಲ್ ಜಾಲಪ್ಪ ಆಸ್ಪತ್ರೆ ಸಹಯೋಗದಲ್ಲಿ ಇಲ್ಲಿ ಮಂಗಳವಾರ ಪೌರ ಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿ, ‘ಪೌರ ಕಾರ್ಮಿಕರರು ಆರೋಗ್ಯವಾಗಿದ್ದರೆ ಮಾತ್ರ ನಗರವಾಸಿಗಳು ನಿವಾಸಿಗಳು ಆರೋಗ್ಯಕರ ಜೀವನ ನಡೆಸಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

‘ಪೌರ ಕಾರ್ಮಿಕರು ಮಳೆ, ಚಳಿ, ಬಿಸಿಲು ಲೆಕ್ಕಿಸದೆ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಾರೆ. ನಗರಕ್ಕೆ ಪೌರ ಕಾರ್ಮಿಕರ ಕೊಡುಗೆ ಅಪಾರ. ಪೌರ ಕಾರ್ಮಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆಯಬೇಕು. ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನ ನಡೆಸಬೇಕು. ನಗರದ ಸ್ವಚ್ಛತೆ ಜತೆಗೆ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ಸುರಕ್ಷತಾ ಸಲಕರಣೆಗಳಿದ್ದೆ ಬರಿಗೈ ಕೆಲಸ ಮಾಡಿದರೆ ಆರೋಗ್ಯ ಹಾಳಾಗುತ್ತದೆ’ ಎಂದರು.

‘ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರಸಭೆಯ ಪೌರ ಕಾರ್ಮಿಕರು ಹಾಗೂ ಜಲಗಾರರಿಗೆ 2 ದಿನಗಳ ಕಾಲ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದೆ’ ಎಂದು ನಗರಸಭೆ ಆಯುಕ್ತ ಪ್ರಸಾದ್‌ ವಿವರಿಸಿದರು.

ನಗರಸಭೆ ಸದಸ್ಯ ರಫಿ, ವೈದ್ಯರಾದ ಡಾ.ಶೀಲಾ, ಡಾ.ದಿನೇಶ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.