ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ 2ನೇ ಅಲೆ ತೀವ್ರತೆ ಹೆಚ್ಚು: ಬಿ.ಎಂ.ಮುಬಾರಕ್‌

Last Updated 7 ಜೂನ್ 2021, 16:55 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್‌ 2ನೇ ಅಲೆಯ ತೀವ್ರತೆ ಹೆಚ್ಚಿದ್ದು, ಜನರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ನಗರಸಭೆ ಸದಸ್ಯಬಿ.ಎಂ.ಮುಬಾರಕ್‌ ಕಿವಿಮಾತು ಹೇಳಿದರು.

ನಗರದ ಕೋಗಿಲಹಳ್ಳಿ ಉರ್ದು ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ‘ಕೋವಿಡ್‌ನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಕೋವಿಡ್‌ ಮೊದಲ ಅಲೆಗಿಂತ 2ನೇ ಅಲೆಯ ತೀವ್ರತೆ ಹೆಚ್ಚಿದ್ದು, ಹಳ್ಳಿ ಹಳ್ಳಿಗೂ ಸೋಂಕು ವ್ಯಾಪಿಸುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದು ಸೂಕ್ತ. ಲಸಿಕೆ ಬಗ್ಗೆ ಆತಂಕಬೇಡ. ಲಸಿಕೆ ಹಾಕಿಸಿಕೊಳ್ಳುವುದರಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ. ಸಾಕಷ್ಟು ಸಂಶೋಧನೆಯ ನಂತರ ಲಸಿಕೆ ನೀಡಲಾಗುತ್ತಿದೆ. ವದಂತಿಗೆ ಕಿವಿಗೂಡದೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಎಲ್ಲವನ್ನೂ ಸರ್ಕಾರವೇ ಮಾಡಲು ಸಾಧ್ಯವಿಲ್ಲ. ಕೋವಿಡ್‌ ನಿಯಂತ್ರಣಕ್ಕೆ ಜನರು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು. ಕೋವಿಡ್‌ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು’ ಎಂದು ನಗರಸಭೆ ಅಧ್ಯಕ್ಷೆ ಶ್ವೇತಾ ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ವೈದ್ಯ ಡಾ.ಪಿರ್ದೋಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT