ಕೋಲಾರ: ಜಿಲ್ಲೆಯ ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರವೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ರಚಿಸುವುದಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭರವಸೆ ನೀಡಿದರು.

ಜಿಲ್ಲಾ ನೌಕರರ ಸಂಘದ ಪದಾಧಿಕಾರಿಗಳ ಇಲ್ಲಿ ಮಂಗಳವಾರ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರನ್ನು ಒಳಗೊಂಡ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ರಚಿಸಲಾಗುತ್ತದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು, ‘ಜಿಲ್ಲೆಯಲ್ಲಿ 20 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರಿದ್ದಾರೆ. ನೌಕರರ ಹಲವು ಸಮಸ್ಯೆಗಳು ನನೆಗುದಿಗೆ ಬಿದ್ದಿವೆ. ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆಯ ಅಗತ್ಯವಿದೆ’ ಎಂದು ಹೇಳಿದರು.

‘ಸರ್ಕಾರದ ಆದೇಶದಂತೆ ನೌಕರರ ಕುಂದು ಕೊರತೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಿತಿ ರಚನೆ ಅನಿವಾರ್ಯವಾಗಿದೆ’ ಎಂದರು.

ಸಂಘದ ಖಜಾಂಚಿ ಕೆ.ವಿಜಯ್, ಪದಾಧಿಕಾರಿಗಳಾದ ಕೆ.ಎನ್.ಮಂಜುನಾಥ್, ಎಸ್.ಚೌಡಪ್ಪ, ಎಂ.ಗೌತಮ್, ಹರೀಶ್, ಎಂ.ನಾಗರಾಜ್, ಆರ್.ನಾಗರಾಜ್, ಅಜಯ್‌ಕುಮಾರ್, ರೆಡ್ಡಪ್ಪ, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ಅಪ್ಪಯ್ಯಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.