ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತಲಾಗುವಷ್ಟರಲ್ಲಿ ಆಸ್ಪತ್ರೆಗೆ ಬೆಳಕು: ಬೆಸ್ಕಾಂ ಅಧಿಕಾರಿಗಳಿಗೆ ಡಿ.ಸಿ ತಾಕೀತು

ಮಾಲೂರು ಆಸ್ಪತ್ರೆಯಲ್ಲಿ ಶಾರ್ಟ್‌ ಸರ್ಕಿಟ್‌
Last Updated 5 ಮಾರ್ಚ್ 2021, 2:18 IST
ಅಕ್ಷರ ಗಾತ್ರ

ಮಾಲೂರು: ಸಂಜೆಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ರಾತ್ರಿ ಆಸ್ಪತ್ರೆಯಲ್ಲಿ ವಿದ್ಯುತ್ ಬೆಳಕು ಕಾಣಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಬೆಸ್ಕಾಂ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕಿಟ್‌ ಸಂಭವಿಸಿದ್ದು, ಸಂಜೆ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ರೋಗಿಗಳು ಕತ್ತಲಲ್ಲಿ ಇರಬಾರದು. ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಎಂದು ಸೂಚಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕಿಟ್‌ ಸಂಭವಿಸಿದೆ. ಇದರಿಂದ ಆಸ್ಪತ್ರೆಯಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಂಡಿದೆ. ಯಾವುದೇ ರೀತಿಯ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ರೋಗಿಗಳು ತೊಂದರೆಪಡುವಂತಾಯಿತು. ಒಳ ರೋಗಿಗಳಿಗೂ ತೊಂದರೆಯಾಗಿದ್ದು, ಆಸ್ಪತ್ರೆಯಲ್ಲಿ ಕತ್ತಲೆ ಆವರಿಸಿತ್ತು.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಸಂತ್ ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕಿಟ್‌ ಸಂಭವಿಸಿರುವುದರ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು. ಪ್ರತಿದಿನ ಸುಮಾರು 1 ಸಾವಿರದಿಂದ 1, 200 ಹೊರರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಇಲ್ಲದೆ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ಪಡೆದ ಕೂಡಲೇ ಸ್ಪಂದಿಸಿದ ಜಿಲ್ಲಾಧಿಕಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ವೀಕ್ಷಿಸಿದರು.

ನಂತರ ಬೆಸ್ಕಾಂ ಅಧಿಕಾರಿಗಳನ್ನು ಸ್ಥಳಕ್ಕೆ ಬರುವಂತೆ ಸೂಚಿಸಿದರು. ಆವರಣದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಆಸ್ಪತ್ರೆ ಕೊಠಡಿಗಳಿಗೆ ಕಲ್ಪಿಸಿರುವ ವಿದ್ಯುತ್ ವೈರ್‌ಗಳು ಹಳೆಯದಾಗಿರುವುದರಿಂದ ಈ ಅವಘಡ ಸಂಭವಿಸಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮನವರಿಕೆ ಮಾಡಿದರು.

ಜಿ.ಪಂ ಕಾರ್ಯ ನಿರ್ವಹಣಾಧಿಕಾರಿ ನಾಗರಾಜ್, ಜಿಲ್ಲಾ ಆರ್‌ಸಿಎಚ್ ವಿಜಯಕುಮಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ, ಡಾ.ವಸಂತ್, ಬೆಸ್ಕಾಂ ಇಲಾಖೆಯ ಎಂಜಿನಿಯರ್ ಪ್ರಶಾಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT