ಮಂಗಳವಾರ, ಏಪ್ರಿಲ್ 20, 2021
29 °C
3 ಸಾವಿರ ಲೀಟರ್‌ ಹಾಲು ಸಂಗ್ರಹ

ಶ್ರೀನಿವಾಸಪುರ: ಬಿಎಂಸಿ ಘಟಕ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಬಿಎಂಸಿ ಘಟಕಗಳ ಸ್ಥಾಪನೆಯಿಂದ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣೆ ಸಾಧ್ಯವಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್. ಹನುಮೇಶ್ ಹೇಳಿದರು.

ತಾಲ್ಲೂಕಿನ ನಾರವಮಾಕಲಹಳ್ಳಿ ಗ್ರಾಮದಲ್ಲಿ ಗುರುವಾರ 3 ಸಾವಿರ ಲೀಟರ್ ಸಾಮರ್ಥ್ಯದ ನೂತನ ಬಿಎಂಸಿ ಘಟಕ ಉದ್ಘಾಟಿಸಿ
ಮಾತನಾಡಿದರು.

ಬಿಎಂಸಿ ಘಟಕಗಳಲ್ಲಿ ಹಾಲನ್ನು ಶಿಥಲೀಕರಣ ಮಾಡುವುದರಿಂದ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ತಾಲ್ಲೂಕಿನಲ್ಲಿ ಪ್ರತಿದಿನ 55 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಹಾಲು ಉತ್ಪಾದಕರಿಗೆ ಲೀಟರ್ ಒಂದಕ್ಕೆ ₹ 27 ನೀಡಲಾಗುತ್ತಿದೆ. ಪಶು ಆಹಾರವನ್ನು ಮೂಟೆಯೊಂದಕ್ಕೆ ₹ 25 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಪ್ರಯೋಜನ ಪಡೆದು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು ಎಂದು ಹೇಳಿದರು.

ಹಾಲು ಉತ್ಪಾದಕರು ಯಾವುದೇ ಕಾರಣಕ್ಕೂ ಖಾಸಗಿ ಡೇರಿಗಳಿಗೆ ಹಾಲು ಮಾರಾಟ ಮಾಡಬಾರದು. ಹಾಗೆ ಮಾಡುವುದರಿಂದ ಹಾಲು ಒಕ್ಕೂಟದ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂದು ಹೇಳಿದರು.

ಕ್ಯಾಂಪ್ ಕಚೇರಿಯ ಉಪ ವ್ಯವಸ್ಥಾಪಕ ಕೆ.ಎಸ್. ನರಸಿಂಹಯ್ಯ, ವಿಸ್ತರಣಾಧಿಕಾರಿಗಳಾದ ಎಂ.ಜಿ. ಶ್ರೀನಿವಾಸ್, ಎಸ್. ವಿನಾಯಕ
ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು