ಮಂಗಳವಾರ, ಜುಲೈ 27, 2021
25 °C

ಕೋಲಾರ: ಕೋವಿಡ್‌ ಸಕ್ರಿಯ ಸೋಂಕಿತರ ಸಂಖ್ಯೆ 1,209ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 140 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,209ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 37 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಉಳಿದಂತೆ ಮಾಲೂರು ತಾಲ್ಲೂಕಿನ 20 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 7 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 13 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 29 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 34 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 166 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 31 ಮಂದಿ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 46 ಮಂದಿ, ಬಂಗಾರಪೇಟೆ ತಾಲ್ಲೂಕಿನ 13, ಮುಳಬಾಗಿಲು ತಾಲ್ಲೂಕಿನ 18 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು