ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸಕ್ರಿಯ ಸೋಂಕಿತರ ಸಂಖ್ಯೆ 353ಕ್ಕೆ ಏರಿಕೆ

Last Updated 10 ಜನವರಿ 2022, 14:38 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 65 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 353ಕ್ಕೆ ಏರಿಕೆಯಾಗಿದೆ.

ಕೋಲಾರ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 22 ಮಂದಿಗೆ, ಮಾಲೂರು ತಾಲ್ಲೂಕಿನ 6 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 8 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 7 ಮಂದಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 15 ಮಂದಿ ಗುಣಮುಖರಾಗಿ ಮನೆಗೆ ಮರಳಿದರು. ಕೋಲಾರ, ಮಾಲೂರು, ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರು, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್‌ ತಾಲ್ಲೂಕಿನ 7 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT