ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಬುಧವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 116ಕ್ಕೆ ಇಳಿಕೆಯಾಗಿದೆ.
ಕೋಲಾರ ತಾಲ್ಲೂಕಿನ 9 ಮಂದಿ, ಮಾಲೂರು ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 6 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಕೋಲಾರ ತಾಲ್ಲೂಕಿನ 3, ಬಂಗಾರಪೇಟೆ ತಾಲ್ಲೂಕಿನ ಇಬ್ಬರು ಮತ್ತು ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.