ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 66ಕ್ಕೆ ಇಳಿಕೆ

Last Updated 21 ಜನವರಿ 2021, 15:02 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 15 ಮಂದಿ ಗುಣಮುಖರಾಗಿ ಗುರುವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 66ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ 9 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಶ್ರೀನಿವಾಪುರ ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 10 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಕೋಲಾರ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನ 3 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT