ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

500ರ ಗಡಿ ದಾಟಿದ ಸಾವಿನ ಸಂಖ್ಯೆ

Last Updated 4 ಜುಲೈ 2021, 13:23 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಭಾನುವಾರ 3 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 500ರ ಗಡಿ ದಾಟಿದೆ.

ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 501ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಹೊಸದಾಗಿ 57 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 906ಕ್ಕೆ ಇಳಿದಿದೆ.

ಕೋಲಾರ ತಾಲ್ಲೂಕಿನ 10 ಮಂದಿಗೆ, ಮಾಲೂರು ತಾಲ್ಲೂಕಿನ 13 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 8 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 5 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 9 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 82 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 16 ಮಂದಿ, ಮಾಲೂರು ತಾಲ್ಲೂಕಿನ 21, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 5 ಮಂದಿ, ಕೆಜಿಎಫ್‌ ತಾಲ್ಲೂಕಿನ 23 ಮಂದಿ ಹಾಗೂ ಮುಳಬಾಗಿಲು ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT