ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಕೊಂಚ ತಗ್ಗಿದ ಸೋಂಕಿತರ ಸಂಖ್ಯೆ

Last Updated 14 ಆಗಸ್ಟ್ 2020, 15:40 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ ಕೊಂಚ ತಗ್ಗಿದ್ದು, ಹೊಸದಾಗಿ 69 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಮಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗುಲಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,157ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಪರ್ಕದಿಂದ 8 ಮಂದಿಗೆ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ಹರಡಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 32 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರವಿರುವ 25 ಮಂದಿಗೆ, ಸೋಂಕಿತರ ಸಂಪರ್ಕದಿಂದ 6 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಹರಡಿರುವುದು ಗೊತ್ತಾಗಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 13 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ತಗುಲಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 3 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಬಂದಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ 9 ಮಂದಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ 6 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ 4 ಮಂದಿಗೆ ಸೋಂಕು ಹರಡಿದೆ. ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT