ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 19ಕ್ಕೆ ಇಳಿಕೆ

Last Updated 24 ಫೆಬ್ರುವರಿ 2021, 14:29 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 5 ಮಂದಿ ಗುಣಮುಖರಾಗಿ ಬುಧವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 19ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ ಇಬ್ಬರು ಮತ್ತು ಮುಳಬಾಗಿಲು ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಕೋಲಾರ ತಾಲ್ಲೂಕಿನ 3 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT