ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 10 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ ಇಬ್ಬರು, ಬಂಗಾರಪೇಟೆ ತಾಲ್ಲೂಕಿನ ಮೂವರು, ಕೆಜಿಎಫ್, ಮುಳಬಾಗಿಲು ತಾಲ್ಲೂಕು ಮತ್ತು ಹೊರ ಜಿಲ್ಲೆಯ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.