ಗುರುವಾರ , ಏಪ್ರಿಲ್ 15, 2021
22 °C

ಸೋಂಕಿತರ ಸಂಖ್ಯೆ 120ಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 14 ಮಂದಿ ಗುಣಮುಖರಾಗಿ ಸೋಮವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 120ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ 5 ಮಂದಿ, ಮಾಲೂರು ತಾಲ್ಲೂಕಿನ 6 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಹೊಸದಾಗಿ 5 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಕೋಲಾರ ತಾಲ್ಲೂಕಿನ 3, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.