ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 17ಕ್ಕೆ ಇಳಿಕೆ

Last Updated 26 ಫೆಬ್ರುವರಿ 2021, 13:35 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 5 ಮಂದಿ ಗುಣಮುಖರಾಗಿ ಶುಕ್ರವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ.

ಮುಳಬಾಗಿಲು ತಾಲ್ಲೂಕಿನ 3 ಮಂದಿ ಮತ್ತು ಕೆಜಿಎಫ್‌ ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 4 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಕೋಲಾರ ತಾಲ್ಲೂಕಿನ 3 ಮಂದಿಗೆ ಮತ್ತು ಮಾಲೂರು ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT