ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೋಂಕಿತರ ಸಂಖ್ಯೆ 28ಕ್ಕೆ ಇಳಿಕೆ

Last Updated 24 ಅಕ್ಟೋಬರ್ 2021, 15:48 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 28ಕ್ಕೆ ಇಳಿಕೆಯಾಗಿದೆ.

ಕೋಲಾರ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ, ಮಾಲೂರು ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT