ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಂಖ್ಯೆ 37ಕ್ಕೆ ಇಳಿಕೆ

Last Updated 27 ಜನವರಿ 2021, 15:43 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 10 ಮಂದಿ ಗುಣಮುಖರಾಗಿ ಬುಧವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 37ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ 4 ಮಂದಿ, ಮಾಲೂರು, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 5 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಕೋಲಾರ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಇಬ್ಬರಿಗೆ, ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT